ಬೆಂಗಳೂಜರು: ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಸರ್ಕಾರಿ ನೌಕರರಿಂದ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ಶ್ರೀನಾಥ್ ಜೋಶಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಶ್ರೀನಾಥ್ ಜೋಶಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ಜುಲೈ 16ರಂದು ಕಾಯ್ದಿರಿಸಿದ್ದ ಆದೇಶವನ್ನು ಲೋಕಾಯುಕ್ತ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ.ರಾಧಾಕೃಷ್ಣ ಶುಕ್ರವಾರ ಪ್ರಕಟಿಸಿದರು. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

‘ಭ್ರಷ್ಟ ಅಧಿಕಾರಿಗಳ ವಿರುದ್ಧ ನಡೆಸಲಾಗುವ ದಾಳಿಗಳನ್ನು ಹೆಸರಿಸಿ ಸರ್ಕಾರಿ ಅಧಿಕಾರಿಗಳನ್ನು ಬ್ಲ್ಯಾಕ್ಮೇಲ್ ಮಾಡುವ ಮೂಲಕ ಹಾಗೂ ದಾಳಿಗಳ ಕುರಿತು ಮುಂಚಿತವಾಗಿಯೇ ಮಾಹಿತಿಯನ್ನು ಸೋರಿಕೆ ಮಾಡುವ ಮುಖಾಂತರ ನಿಂಗಪ್ಪ ಅಪರಾಧ ಎಸಗಿದ್ದಾರೆ’ ಎಂದು ಎಫ್ಐಆರ್ನಲ್ಲಿ ದಾಖಲಿಸಲಾಗಿದ್ದು, ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988ರ ಕಲಂ 7ಎ ಮತ್ತು 7ಎ ಅಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.