ನವದೆಹಲಿ: ಅರಣ್ಯ ನಾಶದ ನೆಪವೊಡ್ಡಿ ಬಳ್ಳಾರಿ ಜಿಲ್ಲೆಯ ಸಂಡೂರಿನ ದೇವದಾರಿಯಲ್ಲಿ ಕುದುರೆಮುಖ ಅದಿರು ಕಂಪನಿಯ ಕಾರ್ಯಾಚರಣೆಗೆ ತಡೆ ಒಡ್ಡಿದ್ದ ಅರಣ್ಯ ಇಲಾಖೆಯು ತುಮಕೂರು ಜಿಲ್ಲೆಯ ಚಿಂಕಾರ ಧಾಮದ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಗಣಿಗಾರಿಕೆಗೆ ರತ್ನಗಂಬಳಿ ಹಾಸಲು ಮುಂದಾಗಿದೆ.

ರಾಜ್ಯದ ಅರಣ್ಯ ಪ್ರದೇಶದ ಗಣಿಗಳಲ್ಲಿ ದಿನದ 24 ಗಂಟೆಯೂ ಗಣಿಗಾರಿಕೆ ನಡೆಸುವುದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿ ಅರಣ್ಯ ಇಲಾಖೆಯು ಈ ಶಿಫಾರಸು ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ. ಮಾನವ–ವನ್ಯಜೀವಿ ಸಂಘರ್ಷಕ್ಕೆ ಅನುವು ಮಾಡಿಕೊಡುವ ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದು ಪರಿಸರ ತಜ್ಞರು, ಸಾಮಾಜಿಕ ಹೋರಾಟಗಾರರು ಆಗ್ರಹಿಸಿದ್ದಾರೆ.

ತುಮಕೂರು ಜಿಲ್ಲೆಯ ಬುಕ್ಕಾಪಟ್ಟಣ ಚಿಂಕಾರ ವನ್ಯಜೀವಿಧಾಮದ ಪರಿಸರ ಸೂಕ್ಷ್ಮ ಪ್ರದೇಶದ 120 ಎಕರೆ ಭೂಮಿಯಲ್ಲಿ ಗಣಿಗಾರಿಕೆ ನಡೆಸಲು ಸಿದ್ಧತೆ ನಡೆದಿದೆ. ಕಬ್ಬಿಣದ ಅದಿರು ಗಣಿಗಾರಿಕೆಗಾಗಿ 17,200 ಮರಗಳನ್ನು ಕತ್ತರಿಸಬೇಕಾಗುತ್ತದೆ. ತುಮಕೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿ ಕಾರಿ, ಹಾಸನ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿ ಕಾರಿ ಈ ಶಿಫಾರಸು ಮಾಡಿದ್ದಾರೆ. ಜತೆಗೆ, ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯಕ್ಕೆ ಪ್ರಸ್ತಾವ ಸಲ್ಲಿಕೆಯಾಗಿದೆ. ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯ ಸಭೆಯಲ್ಲಿ ಈ ಪ್ರಸ್ತಾವ ಇನ್ನಷ್ಟೇ ಚರ್ಚೆಗೆ ಬರಬೇಕಿದೆ. ಈ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಪ್ರತಿಕ್ರಿಯೆ ಪಡೆಯಲು ಯತ್ನಿಸಿದರೂ ಸಂಪರ್ಕಕ್ಕೆ ಸಿಗಲಿಲ್ಲ.

‘ಮಿನರಲ್ ಎಂಟರ್ಪ್ರೈಸಸ್ ಪ್ರೈವೇಟ್ ಲಿಮಿಟೆಡ್’ ಕಂಪನಿಯು ‘ಸಾರಂಗಪಾಣಿ ಮ್ಯಾಂಗನೀಸ್ ಮತ್ತು ಕಬ್ಬಿಣದ ಅದಿರು ಗಣಿಗಾರಿಕೆ ಯೋಜನೆ’ಗಾಗಿ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗೊಲ್ಲರಹಳ್ಳಿ, ಲಕ್ಮೇನಹಳ್ಳಿ, ಕೋಡಿಹಳ್ಳಿ, ಹೊಸಹಳ್ಳಿ, ತೋನಲಾ ಪುರ ಗ್ರಾಮಗಳಲ್ಲಿ ಅಂದಾಜು 53 ಹೆಕ್ಟೇರ್ ಅರಣ್ಯ ಭೂಮಿ ಪರಿವರ್ತನೆ ಕೋರಿ ಅರಣ್ಯ ಇಲಾಖೆಗೆ 2022ರಲ್ಲಿ ಪ್ರಸ್ತಾವ ಸಲ್ಲಿಸಿತ್ತು. 2023ರಲ್ಲಿ ಅರಣ್ಯ ಅಧಿಕಾರಿಗಳ ತಂಡ ಜಂಟಿ ಸಮೀಕ್ಷೆ ನಡೆಸಿತ್ತು. ಕಾಡಿನಲ್ಲಿ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಕೇಳಿರುವ ಜಾಗದ ಪ್ರಮಾಣವನ್ನು ಕಡಿಮೆ ಮಾಡುವಂತೆ ಸಲಹೆನೀಡಿತ್ತು. ಜತೆಗೆ, ಮೂರು ಆಕ್ಷೇಪವ್ಯಕ್ತಪಡಿಸಿತ್ತು. ‘ಗಣಿಗಾರಿಕೆಗೆ ಕೇಳಿರುವ ಅರಣ್ಯದಲ್ಲಿ ಸಮೃದ್ಧ ವನ್ಯಜೀವಿಗಳಿವೆ.

ಪರ್ಯಾಯ ಕಂದಾಯ ಭೂಮಿ ಇದ್ದರೂ ಅದನ್ನು ಬಳಸಿಕೊಳ್ಳುತ್ತಿಲ್ಲ ಏಕೆ’ ಎಂದು ಪ್ರಶ್ನಿಸಿತ್ತು. ಕಂಪನಿಯು 2024ರ ಅಕ್ಟೋಬರ್ನಲ್ಲಿ ಸ್ಪಷ್ಟೀಕರಣ ನೀಡಿತ್ತು. 48.20 ಹೆಕ್ಟೇರ್ಗಳ ಪರಿಷ್ಕೃತ ಪ್ರಸ್ತಾವ ಸಲ್ಲಿಸಿತ್ತು. ಪರಿಹಾರಾತ್ಮಕ ಅರಣ್ಯೀ ಕರಣಕ್ಕೆ ಚಾಮರಾಜನಗರ ಜಿಲ್ಲೆಯಲ್ಲಿ 106 ಎಕರೆ ಭೂಮಿ ಗುರುತಿಸಲಾಗಿತ್ತು.

2024ರ ಡಿಸೆಂಬರ್ ಕೊನೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದ ಡಿಸಿಎಫ್ ಮತ್ತು ಸಿಸಿಎಫ್, ‘ಪ್ರಸ್ತಾವಿತ ಅರಣ್ಯವು ರಾಷ್ಟ್ರೀಯ ಉದ್ಯಾನ, ವನ್ಯಜೀವಿ ಅಭಯಾರಣ್ಯ, ಹುಲಿ ಮೀಸಲು ಪ್ರದೇಶ, ಆನೆ ಕಾರಿಡಾರ್ನ ಭಾಗವಲ್ಲ. ಈ ಪ್ರದೇಶವು ಚಿಂಕಾರ ವನ್ಯಜೀವಿ ಅಭಯಾರಣ್ಯದಿಂದ 7.53 ಕಿ.ಮೀ ದೂರದಲ್ಲಿದೆ. ಆದರೆ, ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಯಲ್ಲಿದೆ’ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ‘ಅರಣ್ಯ ಭೂಮಿಯನ್ನು ಗಣಿಗಾರಿಕೆ ಮತ್ತು ಸಂಪರ್ಕ ರಸ್ತೆಗಾಗಿ ಬಳಸಲಾಗುತ್ತಿದೆ. ಇದೊಂದು ಅತ್ಯಗತ್ಯ ಯೋಜನೆ’ ಎಂಬ ಕಾರಣ ನೀಡಿ ಇಬ್ಬರು ಅಧಿಕಾರಿಗಳು ಶಿಫಾರಸು ಮಾಡಿದ್ದಾರೆ. ಗಣಿಗಾರಿಕೆ ಸಂಸ್ಥೆಯು ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಪ್ರಕಾರ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯ ಪೂರ್ವಾನುಮತಿ ಪಡೆಯಬೇಕು ಎಂದು ಸಿಸಿಎಫ್ ಸೂಚಿಸಿದ್ದಾರೆ.

‘ಸಚಿವರು ಮಧ್ಯಪ್ರವೇಶಿಸಲಿ’

ಪರಿಸರ ನಾಶವಾಗುವ ಹಲವು ಯೋಜನೆಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ತಡೆ ಒಡ್ಡಿರುವುದು ಶ್ಲಾಘನೀಯ. ಆದರೆ, ಅರಣ್ಯ ಇಲಾಖೆಯ ಅಧಿಕಾರಿಗಳು ಅರಣ್ಯ ನಾಶಕ್ಕೆ ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿದ್ದಾರೆ. ಸಚಿವರ ಗಮನಕ್ಕೆ ತಾರದೇ ಅನೇಕ ತೀರ್ಮಾನ

ಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ತುಮಕೂರಿನಲ್ಲಿ ಗಣಿಗಾರಿಕೆಗೆ ಶಿಫಾರಸು ಮಾಡುವ ಮೂಲಕ ದ್ವಂದ್ವ ನಿಲುವು ತಳೆದಿದ್ದಾರೆ. ರಾಜ್ಯದಲ್ಲಿ ಅರಣ್ಯ ವಿಸ್ತೀರ್ಣ ಕ್ಷೀಣಿಸುತ್ತಿರುವ ಹೊತ್ತಿನಲ್ಲಿ ಇಂತಹ ಯೋಜನೆಗಳಿಗೆ ಒಪ್ಪಿಗೆ ನೀಡುವುದು ಸೂಕ್ತವಲ್ಲ. ಈ ವಿಷಯದಲ್ಲಿ ಅರಣ್ಯ ಸಚಿವರು ಮಧ್ಯಪ್ರವೇಶಿಸಬೇಕು ಹಾಗೂ ಗಣಿಗಾರಿಕೆಗೆ ಅವಕಾಶ ನೀಡಕೂಡದು. ಇಲ್ಲದಿದ್ದರೆ ಹೋರಾಟ ನಡೆಸುತ್ತೇವೆ.

-ಎಸ್.ಆರ್.ಹಿರೇಮಠ, ಸಾಮಾಜಿಕ ಹೋರಾಟಗಾರ

ವಿರೋಧವೇಕೆ?

ಈ ಅರಣ್ಯ ಪ್ರದೇಶವು ಚಿರತೆ, ಕರಡಿ, ತೋಳ, ಕತ್ತೆ ಕಿರುಬ, ಕೊಂಡುಕುರಿಯಂತಹ ಕಾಡು ಪ್ರಾಣಿಗಳು ಮತ್ತು ವಿವಿಧ ಪಕ್ಷಿಗಳ ಆವಾಸಸ್ಥಾನವಾಗಿದ್ದು, ಗಣಿಗಾರಿಕೆ ಆರಂಭಿಸಿದರೆ ಆವಾಸಸ್ಥಾನ ನಾಶಗೊಂಡು ಮಾನವ– ವನ್ಯಜೀವಿ ಸಂಘರ್ಷ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವನ್ಯಜೀವಿ ತಜ್ಞರು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.