ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಲಮಿತಿಯೊಳಗೆ ಎತ್ತಿನಹೊಳೆ ಯೋಜನೆ‌ ಪೂರ್ಣ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ‌

Published : 11 ಮೇ 2020, 6:48 IST
ಫಾಲೋ ಮಾಡಿ
Comments

ಬೆಂಗಳೂರು: ಎತ್ತಿನಹೊಳೆ ಯೋಜನೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ಸಂಕಲ್ಪಕ್ಕೆ ಸರ್ಕಾರ ಕಟಿಬದ್ಧವಾಗಿದ್ದು ಮಾರ್ಚ್ 2021 ಕ್ಕೆ ಮೊದಲ ಹಂತದ ಯೋಜನೆ ಆರಂಭವಾಗಲಿದೆ ಎಂದು ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ‌ ತಿಳಿಸಿದರು.

ಎತ್ತಿನಹೊಳೆ ಯೋಜನೆ ಕುರಿತಂತೆ ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ‌ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಯಲ್ಲಿ ಮಾತನಾಡಿದ ಅವರು, 5 ಸಿವಿಲ್ ಮತ್ತು 2 ಎಲೆಕ್ಟ್ರಿಕಲ್ ಪ್ಯಾಕೇಜ್ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು. ಕಾಲಮಿತಿಯೊಳಗೆ ವಿದ್ಯುತ್ ಶಕ್ತಿ ಪೂರೈಸುವ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

'ಯೋಜನೆಯ ಹಲವಾರು ಪ್ರದೇಶಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮುಗಿದಿಲ್ಲ. ರೈತರ ಮನ ಒಲಿಸಿ ಪರಿಹಾರ ನೀಡಬೇಕು. ಯೋಜನೆಯ ಮೊದಲ ಹಂತ ಮುಂದಿನ ವರ್ಷದ ಮಾರ್ಚ್ ಒಳಗೆ ಮುಗಿಯಲೇಬೇಕು. ಮುಂದಿನ‌ ಮಳೆಗಾಲದಲ್ಲಿ ನೀರು ಹರಿಸುವಂತಾಗಬೇಕು' ಎಂದು‌ ಸಚಿವರು ಸೂಚಿಸಿದರು.

ಸಭೆಯಲ್ಲಿ ವಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ್ ರಾವ್ ಪೇಶ್ವೆ ಸೇರಿದಂತೆ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT