ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿಯವರೇನು ಆರ್ಥಿಕ ತಜ್ಞರಾ: ಸಿದ್ದರಾಮಯ್ಯ ಪ್ರಶ್ನೆ

Published 26 ಡಿಸೆಂಬರ್ 2023, 10:04 IST
Last Updated 26 ಡಿಸೆಂಬರ್ 2023, 10:04 IST
ಅಕ್ಷರ ಗಾತ್ರ

ಬೆಂಗಳೂರು: ‘ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದರೆ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಯಾವ ಆಧಾರದಲ್ಲಿ ಹೇಳಿದರು. ಅವರೇನು ಆರ್ಥಿಕ ತಜ್ಞರಾ?’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ‘ಯುವನಿಧಿ’ ಫಲಾನುಭವಿಗಳ ನೋಂದಣಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿರುವ ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದರೆ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದಲ್ಲಿ ಹೇಳಿದ್ದರು. ಅವರ ಮಾತು ಸುಳ್ಳಾಗಿದೆ’ ಎಂದರು.

‘ಎಲ್ಲ ಗ್ಯಾರಂಟಿಗಳಿಗೂ ಬಜೆಟ್‌ನಲ್ಲಿ ಅನುದಾನ ಒದಗಿಸಿ ಅನುಷ್ಠಾನಕ್ಕೆ ತಂದಿದ್ದೇವೆ. ಮೋದಿ ಒಬ್ಬ ಸುಳ್ಳುಗಾರ ಪ್ರಧಾನಿ ಎಂಬುದು ಸಾಬೀತಾಗಿದೆ. ಹನ್ನೆರಡು ವರ್ಷ ಮುಖ್ಯಮಂತ್ರಿಯಾಗಿ, ಹತ್ತು ವರ್ಷ ಪ್ರಧಾನಿಯಾಗಿರುವ ವ್ಯಕ್ತಿ ಹೀಗೆಲ್ಲ ಮಾತನಾಡಬಹುದೆ?’ ಎಂದು ಕೇಳಿದರು.

‘ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಂತೆ ಐದು ಗ್ಯಾರಂಟಿಗಳನ್ನೂ ಜಾರಿ ಮಾಡುತ್ತಿದ್ದೇವೆ. ಇದರಿಂದ ಸರ್ಕಾರ ದಿವಾಳಿಯಾಗಿಲ್ಲ. ಜನರಿಗೆ ಆರ್ಥಿಕ ಶಕ್ತಿ ಬಂದಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT