ಗುರುವಾರ, 7 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರ ನಡೆಸುವ ವಿಚಾರದಲ್ಲಿ ಮಾತ್ರ ಯಡಿಯೂರಪ್ಪ ಅವರಿಗೆ ವಯಸ್ಸಾಗಿತ್ತೇ?: ಕಾಂಗ್ರೆಸ್

Published 4 ಜುಲೈ 2023, 14:16 IST
Last Updated 4 ಜುಲೈ 2023, 14:16 IST
ಅಕ್ಷರ ಗಾತ್ರ

ಬೆಂಗಳೂರು: ವಯಸ್ಸಿನ ಕಾರಣ ನೀಡಿ ಬಿ. ಎಸ್‌ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ಬಿಜೆಪಿ, ಇದೀಗ ರಾಜಕೀಯ ಕಾರಣಕ್ಕಾಗಿ ಅವರನ್ನು ಫ್ರೀಡಂ ಪಾರ್ಕಿನಲ್ಲಿ, ಬಿಸಿಲು, ಮಳೆಯಲ್ಲಿ ಕೂರಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್‌ ಟೀಕಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್, ಬಿ. ಎಸ್‌ ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ ಪದಚ್ಯುತಿಗೊಳಿಸಿ, ನಂತರ ವಯಸ್ಸಿನ ಕಾರಣ ನೀಡಿದ ಬಿಜೆಪಿ, ಈಗ ರಾಜಕೀಯ ಕಾರಣಕ್ಕಾಗಿ ಅವರನ್ನು ಫ್ರೀಡಂ ಪಾರ್ಕಿನಲ್ಲಿ, ಬಿಸಿಲು, ಮಳೆಯಲ್ಲಿ ಕೂರಿಸುತ್ತಿರುವುದು ನಾಚಿಕೆಗೇಡು ಎಂದು ಕುಟುಕಿದೆ.

ಅಧಿಕಾರ ನಡೆಸುವ ವಿಚಾರದಲ್ಲಿ ಮಾತ್ರ ಬಿ. ಎಸ್‌ ಯಡಿಯೂರಪ್ಪ ಅವರಿಗೆ ವಯಸ್ಸಾಗಿತ್ತೇ, ಈಗ ಅವರು ಹದಿನೆಂಟರ ಪ್ರಾಯದವರೇ?, ಬೇಕಾದಾಗ ಬಳಸಿ, ಬೇಡವಾದಾಗ ಬಿಸಾಡುವುದಕ್ಕೆ ಬಿಎಸ್‌ವೈ ಅವರೇನು ಟಿಶ್ಯು ಪೇಪರ್ ಎಂದುಕೊಂಡಿದೆಯೇ ಬಿಜೆಪಿ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಒಬ್ಬ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದ ಬಿಜೆಪಿ, ರಾಜಕೀಯದಿಂದ ದೂರ ತಳ್ಳಿದ್ದ ಬಿ. ಎಸ್‌ ಯಡಿಯೂರಪ್ಪ ಅವರನ್ನೇ ಮತ್ತೆ ಆಶ್ರಯಿಸಿದ್ದು ಮಾತ್ರ ಬಿಜೆಪಿಯ ಶೋಚನೀಯ ಸ್ಥಿತಿಗೆ ಹಿಡಿದ ಕನ್ನಡಿ. ಅಗತ್ಯವಿದ್ದಾಗ ಕಾಲು ಹಿಡಿಯುವುದು, ಅಗತ್ಯವಿಲ್ಲದಾಗ ಕಾಲು ಎಳೆಯುವುದು ಬಿಜೆಪಿಯ ಸಂಸ್ಕೃತಿ! ಎಂದು ವ್ಯಂಗ್ಯವಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT