ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಹ್ಯಾಕಾಶದಾಚೆಗೂ ಮಹಿಳಾ ವಿಜ್ಞಾನಿಗಳ ಛಾಪು: ಧನಕರ್ ಶ್ಲಾಘನೆ

Published 8 ಮಾರ್ಚ್ 2024, 16:06 IST
Last Updated 8 ಮಾರ್ಚ್ 2024, 16:06 IST
ಅಕ್ಷರ ಗಾತ್ರ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೊ) ಮಹಿಳೆಯರಿಗೆ ಸಾಕಷ್ಟು ಅವಕಾಶ ನೀಡುತ್ತಿರುವ ಫಲವಾಗಿ ಮಹಿಳಾ ವಿಜ್ಞಾನಿಗಳು ಬಾಹ್ಯಾಕಾಶ ಹಾಗೂ ಅದರಾಚೆಗೂ ತಮ್ಮ ಛಾಪು ಮೂಡಿಸಿದ್ದಾರೆ ಎಂದು ಉಪ ರಾಷ್ಟ್ರಪತಿ ಜಗದೀಪ್‌ ಧನಕರ್ ಹೇಳಿದರು.

ಇಸ್ರೊದ ಯು.ಆರ್‌. ರಾವ್ ಉಪಗ್ರಹ ಕೇಂದ್ರದಲ್ಲಿ ಶುಕ್ರವಾರ ಮಹಿಳಾ ದಿನಾಚರಣೆ ಪ್ರಯುಕ್ತ ವಿಜ್ಞಾನಿಗಳೊಂದಿಗೆ ‌ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಹುಟ್ಟಿನಿಂದಲೇ ಮಹಿಳೆಯರಲ್ಲಿ ನಾಯಕತ್ವದ ಗುಣ ಇರುತ್ತದೆ. ಅವರಿಗೆ ಸೂಕ್ತ ಅವಕಾಶ ದೊರೆತರೆ ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಾರೆ. ಇಸ್ರೊ ಲಿಂಗ ತಾರತಮ್ಯ ಮಾಡದೇ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನೀಡಿದೆ. ಅಂತರಿಕ್ಷ ಯಾನಕ್ಕೂ ಕಳುಹಿಸಿಕೊಟ್ಟಿದೆ. ಮಹಿಳಾ ಒಳಗೊಳ್ಳುವಿಕೆಯನ್ನು ಉತ್ತೇಜಿಸಿದೆ. ಹಾಗಾಗಿಯೇ ದೇಶದ ಇತರೆ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಇಸ್ರೊದ ವೈಜ್ಞಾನಿಕ ಮತ್ತು ತಾಂತ್ರಿಕ ಕ್ಷೇತ್ರಗಳಲ್ಲಿ ಪ್ರಸ್ತುತ ಶೇ 20ರಷ್ಟು ಮಹಿಳೆಯರು ಇದ್ದಾರೆ. ಕೇಂದ್ರವನ್ನು ಮುನ್ನಡೆಸುವುದು ಸೇರಿದಂತೆ ಆಡಳಿತ ಮತ್ತು ವ್ಯವಸ್ಥಾಪನಾ ಕ್ಷೇತ್ರಗಳಲ್ಲಿ 500ಕ್ಕೂ ಹೆಚ್ಚು ಮಹಿಳಾ ಉದ್ಯೋಗಿಗಳು ವಿವಿಧ ಹಂತದ ನಾಯಕತ್ವ ವಹಿಸಿದ್ದಾರೆ. ಇದು ಭಾರತವು ಮಹಿಳೆಯರಿಗೆ ನೀಡುತ್ತಿರುವ ಆದ್ಯತೆಯ ದ್ಯೋತಕವೂ ಆಗಿದೆ ಎಂದು ಬಣ್ಣಿಸಿದರು.

ರಾಜ್ಯಪಾಲ ಥಾವರಚಂದ್‌ ಗೆಹಲೋತ್, ಇಸ್ರೊ ಅಧ್ಯಕ್ಷ ಎಸ್‌.ಸೋಮನಾಥ್, ಹೆಚ್ಚುವರಿ ಕಾರ್ಯದರ್ಶಿ ಸಂಧ್ಯಾ ವೇಣುಗೋಪಾಲ್, ಯು.ಆರ್‌. ರಾವ್ ಉಪಗ್ರಹ ಕೇಂದ್ರದ ನಿರ್ದೇಶಕ ಎಂ.ಸಂಕರನ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT