ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಡಿಕೆ ಐಟಿ ಇಲಾಖೆ ಪ್ರತಿನಿಧಿಯೇ?– ಡಿಕೆಶಿ

Published 14 ಅಕ್ಟೋಬರ್ 2023, 15:34 IST
Last Updated 14 ಅಕ್ಟೋಬರ್ 2023, 15:34 IST
ಅಕ್ಷರ ಗಾತ್ರ

ಬೆಂಗಳೂರು: ‘ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುತ್ತಿಗೆದಾರರೊಬ್ಬರ ಮನೆ ಮೇಲೆ ದಾಳಿ ಮಾಡಿರುವ ವಿಚಾರದಲ್ಲಿ ನನ್ನ ಹೆಸರು ತಳುಕು ಹಾಕಿ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಯೇನೂ ಅಲ್ಲ. ಆದರೂ ಮಾತನಾಡುತ್ತಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

ಐಟಿ ದಾಳಿ ಬೆನ್ನಲ್ಲೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಮಾಡುತ್ತಿರುವ ಆರೋಪಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಯಾರು ಏನು ಆರೋಪ ಮಾಡುತ್ತಾರೋ ಮಾಡಲಿ. ಆದಾಯ ಇಲಾಖೆ ಅಧಿಕಾರಿಗಳ ದಾಳಿ, ತನಿಖೆ ಮುಗಿದ ನಂತರ ತಮ್ಮ ಹೇಳಿಕೆಯನ್ನು ಪ್ರಕಟಿಸಲಿ. ಆ ನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ’ ಎಂದರು.

‘ನನ್ನ ವಿರುದ್ಧ ಆರೋಪ ಮಾಡುತ್ತಿರುವ ಕುಮಾರಸ್ವಾಮಿ ಆಗಲಿ, ಬಿಜೆಪಿ ನಾಯಕರಾಗಲಿ ಆದಾಯ ಇಲಾಖೆ ಪ್ರತಿನಿಧಿಗಳೇನೂ ಅಲ್ಲ. ನಾನು ತಿಹಾರ್ ಜೈಲಿಗೆ ಹೋಗುತ್ತೇನೆ ಎಂದು ಕುಮಾರಸ್ವಾಮಿ ಈಗಾಗಲೇ ಹೇಳಿದ್ದಾರೆ. ಆ ಮೂಲಕ, ತಾನು ಏನು ಮಾಡಲು ಹೊರಟಿದ್ದೇನೆ ಎಂಬುದನ್ನು ಹೇಳಿದ್ದಾರೆ’ ಎಂದರು.

ಇನ್ನು ಮುಂದೆಯೂ ರಾಜಕೀಯ ಪ್ರೇರಿತ ದಾಳಿ ನಡೆಯಲಿವೆಯೇ ಎಂದು ಕೇಳಿದಾಗ, ‘ಈ ವಿಚಾರವಾಗಿ ನಾನು ಈಗ ಏನನ್ನೂ ಹೇಳುವುದಿಲ್ಲ. ಈ ಹಿಂದೆ ಯಡಿಯೂರಪ್ಪ ಅವರ ಕಾಲದಲ್ಲಿ ಏನಾಯಿತು? ಆಗ ಅವರಿಗೆ ಏನು ಸಿಕ್ಕಿದೆ? ಎಲ್ಲವೂ ದಾಖಲೆಗಳಲ್ಲಿವೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಖಲೆ ಬಿಡುಗಡೆ ಮಾಡಿದ ನಂತರ ಮಾತನಾಡೋಣ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT