ಬೆಂಗಳೂರು: ‘ಸಮ್ಮಿಶ್ರ ಸರ್ಕಾರ (ಜೆಡಿಎಸ್–ಕಾಂಗ್ರೆಸ್) ಇದ್ದಾಗ ನೈಸ್ ಹಗರಣದ ತನಿಖೆ ನಡೆಸಲು ಕಾಂಗ್ರೆಸ್‌ನವರು ಕೈಕಟ್ಟಿ ಹಾಕಿದ್ದರು ಎನ್ನುವ ಎಚ್.ಡಿ. ಕುಮಾರಸ್ವಾಮಿ ಆರೋಪ ಸುಳ್ಳು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಸಾಲಮನ್ನಾ ಸೇರಿದಂತೆ ಇತರೆ ಕಾರ್ಯಕ್ರಮಗಳಿಗೆ ಕಾಂಗ್ರೆಸ್ ಬೆಂಬಲ ನೀಡಿರಲಿಲ್ಲವೇ? ಕಾಂಗ್ರೆಸ್ ಕೈಕಟ್ಟಿ ಹಾಕಿತ್ತು ಎಂದು ಅವರು ರಾಜೀನಾಮೆ ನೀಡಿದರೆ? ತಮ್ಮ ಸ್ವಯಂತಪ್ಪಿನಿಂದಲೇ ಅವರು ಸರ್ಕಾರ ಕಳೆದುಕೊಳ್ಳುವಂತಾಯಿತು’ ಎಂದರು.

‘ಕಾಂಗ್ರೆಸ್ ಸರ್ಕಾರದ ನಂತರ ಬಂದ ಸಮ್ಮಿಶ್ರ ಸರ್ಕಾರದ ಸಂದರ್ಭದಲ್ಲಿಯೇ ನೈಸ್ ಹಗರಣ ವಿಚಾರದಲ್ಲಿ ಕ್ರಮ ತೆಗೆದುಕೊಳ್ಳಬಹುದಿತ್ತು’ ಎಂದೂ ಹೇಳಿದರು.

ಇದೇ ಮೊದಲು: ‘ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಮತ್ತು 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿ ಇಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂಥ ಪರಿಸ್ಥಿತಿ ಒದಗಿಬಂತು’ ಎಂದು ಸಿದ್ದರಾಮಯ್ಯ ಹೇಳಿದರು.

ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ವಿಧಾನಮಂಡಲದ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದು ಬಿಟ್ಟು, ಹೊರಗೆ ಹೋರಾಟ ಮಾಡುವುದರಿಂದ ಪ್ರಯೋಜನವಿಲ್ಲ’ ಎಂದರು.

‘ವಿರೋಧ ಪಕ್ಷದವರು ಚರ್ಚೆಗಳಲ್ಲಿ ಭಾಗವಹಿಸಲಿ ಎಂದು ಮೂರು ವಾರಗಳ ಕಾಲ ಅಧಿವೇಶನ ನಡೆಸಲಾಯಿತು. ಆದರೆ, ವಿಧಾನಸಭೆಗೆ ಬಾರದೆ ಗದ್ದಲದಲ್ಲೇ ಸಮಯ ವ್ಯರ್ಥಗೊಳಿಸಿದರು. ಅವರ ನಡವಳಿಕೆ ಸರಿ ಇರದಿದ್ದ ಕಾರಣ ಸಭಾಧ್ಯಕ್ಷರು ಕ್ರಮ ತೆಗೆದುಕೊಂಡಿದ್ದಾರೆ. ಸಭಾಧ್ಯಕ್ಷರ ಕ್ರಮಕ್ಕೂ, ನಮಗೂ ಸಂಬಂಧ ಇಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.