ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆಗೆ ಅಭ್ಯರ್ಥಿಯಾಗುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ: ಜಗದೀಶ ಶೆಟ್ಟರ್

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಭೇಟಿ ನಂತರ ಧಾರವಾಡ ಲೋಕಸಭೆಗೆ ಸ್ಪರ್ಧಿಸುವ ಕುರಿತು ಶೆಟ್ಟರ್ ಪ್ರತಿಕ್ರಿಯೆ
Published 31 ಮೇ 2023, 8:17 IST
Last Updated 31 ಮೇ 2023, 8:17 IST
ಅಕ್ಷರ ಗಾತ್ರ

ಹುಬ್ಬಳ್ಳಿ: 'ಪಕ್ಷದ ವರಿಷ್ಠರ ಜೊತೆ ಚರ್ಚಿಸಿ ಸೂಕ್ತ ಸ್ಥಾನಮಾನ ನೀಡುವ ಭರವಸೆಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೀಡಿದ್ದಾರೆ' ಎಂದು ಜಗದೀಶ ಶೆಟ್ಟರ್ ಹೇಳಿದರು.

ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ನಾನು ಕಾಂಗ್ರೆಸ್'ಗೆ ಯಾವ ರೀತಿ ಶಕ್ತಿ ತುಂಬಿದ್ದೇನೆ ಅನ್ನೋದು ಪಕ್ಷದ ವರಿಷ್ಠರಿಗೆ ಗೊತ್ತಿದೆ. ಯಾವ ರೀತಿ ನನ್ನ ಬಳಸಿಕೊಳ್ಳಬೇಕು ಎನ್ನುವ ಕುರಿತು ಪಕ್ಷದಲ್ಲಿ ಚರ್ಚೆ ನಡೆಯುತ್ತಿದೆ' ಎಂದರು.

'ನಾನು ಕಾಂಗ್ರೆಸ್ ಸೇರ್ಪಡೆಯಾಗಿದ್ದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್'ಗೆ ಲಾಭವಾಗಿದೆ ಎಂದು‌ ಡಿಕೆಶಿ ಹೇಳಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಗೆ ಹೇಗೆ ಕೆಲಸ ಮಾಡಬೇಕು, ಎಷ್ಟು ಸ್ಥಾನಗಳ ಗುರಿ ಇಟ್ಟುಕೊಳ್ಳಬಹುದು ಹಾಗೂ ಪಕ್ಷ ಬಲರ್ಧನೆ ಕುರಿತು ಚರ್ಚೆ ನಡೆಯಿತು. ಆ ಕುರಿತು ಬೆಂಗಳೂರಿನಲ್ಲಿ ಮುಖಂಡರ ಜೊತೆ ಸಭೆ ನಡೆಸುವ ಕುರಿತು ನಿರ್ಧರಿಸಲಾಗಿದೆ' ಎಂದು ಹೇಳಿದರು.

'ಲೋಕಸಭಾ ಕ್ಷೇತ್ರಕ್ಕೆ ನನ್ನನ್ನು ಅಭ್ಯರ್ಥಿಯನ್ನಾಗಿಸುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಲೋಕಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಇದೆ. ಸಚಿವ ಸ್ಥಾನಕ್ಕೆ ನಾನು ಯಾವುದೇ ಬೇಡಿಕೆಯಿಟ್ಟಿಲ್ಲ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT