ಸೋಮವಾರ, 2 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಿತ್ ಶಾ ಕರೆ ಮಾಡಿಲ್ಲ: ಶೆಟ್ಟರ್‌

Published 26 ಆಗಸ್ಟ್ 2023, 14:21 IST
Last Updated 26 ಆಗಸ್ಟ್ 2023, 14:21 IST
ಅಕ್ಷರ ಗಾತ್ರ

ಉಡುಪಿ: ‘ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಯಾವ ನಾಯಕರೂ ಕರೆ ಮಾಡಿ ನನ್ನ ಜೊತೆ ಮಾತನಾಡಿಲ್ಲ’ ಎಂದು ಕಾಂಗ್ರೆಸ್ ನಾಯಕ ಜಗದೀಶ ಶೆಟ್ಟರ್ ಸ್ಪಷ್ಟಪಡಿಸಿದರು.

ಶನಿವಾರ ಮಣಿಪಾಲದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಬಿಜೆಪಿಯು ರಾಜ್ಯದಲ್ಲಿ ನಾಯಕತ್ವರಹಿತ ಪಕ್ಷವಾಗಿದೆ. ಹೊಸ ರಾಜ್ಯಾಧ್ಯಕ್ಷರ ನೇಮಕ  ಮಾಡಲು ಸಹ ಇದುವರೆಗೆ ಸಾಧ್ಯವಾಗಿಲ್ಲ. ಬಿಜೆಪಿಯಲ್ಲಿ ಒಬ್ಬರೂ ನಾಯಕರಿಲ್ಲ; ರಾಜ್ಯದಲ್ಲಿ ಬಿಜೆಪಿ ಮತ್ತಷ್ಟು ದಯನೀಯ ಸ್ಥಿತಿಗೆ ಇಳಿಯಲಿದೆ’ ಎಂದು ಹೇಳಿದರು.

‘ಬಿಜೆಪಿಯ ಒಳಗೆ ಸಾಕಷ್ಟು ನಾಯಕರು ನೊಂದು ಸಂಕಟಪಡುತ್ತಿದ್ದು, ಪಕ್ಷ ಬಿಟ್ಟು ಬರಲು ಸಿದ್ಧರಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಲಿದ್ದು, 12ರಿಂದ 15 ಸ್ಥಾನ ಗೆಲ್ಲುವುದು ನಿಶ್ಚಿತ’ ಎಂದು ಶೆಟ್ಟರ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT