ಬೆಂಗಳೂರು: ಚಿಕ್ಕೋಡಿ ಹಿರೇಕೋಡಿ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜ ಮುನಿ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.
ವಿಧಾನಸಭೆಯಲ್ಲಿ ಬುಧವಾರ ಹೇಳಿಕೆ ನೀಡಿದ ಅವರು, ‘ಜೈನ ಮುನಿ ಕೊಲೆ ಪ್ರಕರಣದಲ್ಲಿ ನಾರಾಯಣ ಮಾಳಿ, ಹಸನ್‌ಸಾಬ ಮಕ್ಬೂಲ್ ದಲಾಯತ್ ಅವರನ್ನು ಬಂಧಿಸಲಾಗಿದೆ. ಹಣಕಾಸಿನ ವ್ಯವಹಾರದ ಸಂಬಂಧ ಕೊಲೆ ನಡೆದಿದೆ ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗುವುದು’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.