ಬೆಂಗಳೂರು: ರಾಷ್ಟ್ರೀಯ ಜಲಜೀವನ ಮಿಷನ್ ಅಭಿಯಾನದ ಅಡಿಯಲ್ಲಿ ಕರ್ನಾಟಕಕ್ಕೆ, ಕೇಂದ್ರ ಸರ್ಕಾರವು ತನ್ನ ಪಾಲಿನ ₹13,000 ಕೋಟಿಯನ್ನು ಬಾಕಿ ಉಳಿಸಿಕೊಂಡಿದೆ. ಈ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ಅವರಿಗೆ ಪತ್ರ ಬರೆದಿದ್ದಾರೆ.

‘ಕರ್ನಾಟಕಕ್ಕೆ ಒಟ್ಟು ₹69,487 ಕೋಟಿ ಮೊತ್ತದಷ್ಟು ಕಾಮಗಾರಿಗಳಿಗೆ ಅನುಮೋದನೆ ದೊರೆತಿದೆ. ಕರ್ನಾಟಕವು ತನ್ನ ಪಾಲಿನಲ್ಲಿ ಈಗಾಗಲೇ ₹24,598 ಕೋಟಿ ವೆಚ್ಚ ಮಾಡಿದೆ. ಈವರೆಗೆ ನಡೆದಿರುವ ಕಾಮಗಾರಿಗಳಿಗೆ ಕೇಂದ್ರ ಸರ್ಕಾರವು ಒಟ್ಟು ₹24,786 ಕೋಟಿ ಬಿಡುಗಡೆ ಮಾಡಬೇಕಿತ್ತು. ಆದರೆ ₹11.786 ಕೋಟಿಯನ್ನಷ್ಟೇ ನೀಡಿದ್ದು, ₹13,000 ಕೋಟಿಯನ್ನು ಇನ್ನಷ್ಟೇ ಬಿಡುಗಡೆ ಮಾಡಬೇಕಿದೆ’ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

‘ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರವು ಕರ್ನಟಕಕ್ಕೆ ₹3,804 ಕೋಟಿ ಹಂಚಿಕೆ ಮಾಡಿದೆ. ಆದರೆ ಅದರಲ್ಲಿ ಈವರೆಗೆ ಬಿಡುಗಡೆಯಾಗಿರುವುದು ₹570 ಕೋಟಿ ಮಾತ್ರ. ಆದರೆ ರಾಜ್ಯ ಸರ್ಕಾರವು ತನ್ನ ಪಾಲಿನ ವೆಚ್ಚವನ್ನು ಈಗಾಗಲೇ ಮಾಡಿದೆ. ರಾಜ್ಯದಲ್ಲಿ ಈ ಆರ್ಥಿಕ ವರ್ಷದಲ್ಲಿ ₹1,700 ಕೋಟಿ ಮೊತ್ತದಷ್ಟು ಕಾಮಗಾರಿ ಮುಗಿದಿದ್ದು, ₹2,600 ಕೋಟಿಯಷ್ಟು ಕಾಮಗಾರಿಗಳು ನಡೆಯುತ್ತಿವೆ. ಕೇಂದ್ರವು ಅನುದಾನ ಬಿಡುಗಡೆ ಮಾಡದೇ ಇರುವುದರಿಂದ ಕಾಮಗಾರಿಗಳು ಸ್ಥಗಿತವಾಗುವ ಸಾಧ್ಯತೆ ಇದೆ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

‘ಮನೆ–ಮನೆಗೆ ನಲ್ಲಿ ಯೋಜನೆ ಅಡಿಯಲ್ಲಿ ಕರ್ನಾಟಕವು ಈಗಾಗಲೇ ಶೇ 86ರಷ್ಟು ಪ್ರಗತಿ ಸಾಧಿಸಿದೆ. ಸಂಪೂರ್ಣ ಗುರಿ ಮುಟ್ಟುವಲ್ಲಿ ಕೇಂದ್ರ ಸರ್ಕಾರವು ತನ್ನ ಹೊಣೆಗಾರಿಕೆ ನಿಭಾಯಿಸುವುದು ಅತ್ಯಂತ ಮಹತ್ವದ್ದು. ಹೀಗಾಗಿ, ಬಾಕಿ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.