ಬೆಂಗಳೂರು: ಕೇಂದ್ರ ಸರ್ಕಾರದ ಹಣಕಾಸು ಒಳಗೊಳ್ಳುವಿಕೆಯ ಪ್ರಮುಖ ಯೋಜನೆಗಳಾದ ಜನಧನ್ ಯೋಜನೆ, ಜೀವನ್ ಜ್ಯೋತಿ ಬಿಮಾ ಯೋಜನೆ, ಸುರಕ್ಷಾ ಬಿಮಾ ಯೋಜನೆ, ಅಟಲ್ ಪೆನ್ಷನ್ ಯೋಜನೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಜನರಿಗೆ ತಲುಪಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತೆ ಹಾಗೂ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್ ತಿಳಿಸಿದರು.

ವಿಧಾನಸೌಧದಲ್ಲಿ ಮಂಗಳವಾರ ನಡೆದ ರಾಜ್ಯ ಮಟ್ಟದ ಬ್ಯಾಂಕರ್ಗಳ ಸಮಿತಿಯ 170ನೇ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಮೂರು ತಿಂಗಳ ಅಭಿಯಾನ ಜುಲೈ 1ರಂದು ಆರಂಭಿಸಲಾಗಿದ್ದು, ಸೆಪ್ಟಂಬರ್ 30ರೊಳಗೆ ಎಲ್ಲ ಗ್ರಾಮ ಪಂಚಾಯತಿಗಳನ್ನು ತಲುಪಲಾಗುವುದು ಎಂದು ಅವರು ಹೇಳಿದರು.

ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಮತ್ತು ಅಗತ್ಯ ಬೆಂಬಲ ನೀಡಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೇ, ನಿಷ್ಕ್ರಿಯಗೊಂಡಿರುವ ಜನಧನ್ ಖಾತೆಗಳಿಗೆ ಕೆವೈಸಿ ಮರು ಪರಿಶೀಲನೆ ನಡೆಸಲಾಗುವುದು. ಬ್ಯಾಂಕ್ ಖಾತೆ ಹೊಂದಿಲ್ಲದವರಿಗೆ ಜನಧನ್ ಖಾತೆಗಳನ್ನು ತೆರೆಯಲಾಗುವುದು. ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ಮತ್ತು ಅಟಲ್ ಪಿಂಚಣಿ ಯೋಜನೆ ಅಡಿ ನೋಂದಣಿ ಮಾಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ವಿವರಿಸಿದರು.

ಭಾರತೀಯ ರಿಸರ್ವ್ ಬ್ಯಾಂಕಿನ ಪ್ರಾದೇಶಿಕ ನಿರ್ದೇಶಕಿ ಸೋನಾಲಿ ಸೇನ್ ಗುಪ್ತಾ ಮಾತನಾಡಿ, ಎಲ್ಲ ಸದಸ್ಯ ಬ್ಯಾಂಕ್ಗಳು ಗ್ರಾಮಾಂತರ ಪ್ರದೇಶದ ಅರ್ಹ ಜನರನ್ನು ಬ್ಯಾಂಕ್ ವ್ಯವಸ್ಥೆಯೊಳಗೆ ತರಬೇಕು. ಕೆವೈಸಿಯನ್ನು ಪುನಃ ಸಕ್ರಿಯಗೊಳಿಸಬೇಕು ಎಂದು ಅವರು ಸೂಚನೆ ನೀಡಿದರು.

ನಬಾರ್ಡ್ನ ಮುಖ್ಯ ಮಹಾಪ್ರಬಂಧಕ ಡಾ.ಸುರೇಂದ್ರ ಬಾಬು ಮಾತನಾಡಿ, ಎಲ್ಲ ಗ್ರಾಮೀಣ ಸಹಕಾರಿ ಬ್ಯಾಂಕುಗಳು ಈ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಕೆನರಾ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕ ಭವೇಂದ್ರ ಕುಮಾರ್, ರಾಜ್ಯ ಹಣಕಾಸು ಇಲಾಖೆ ಕಾರ್ಯದರ್ಶಿ ವಿಶಾಲ್. ಆರ್ ಮತ್ತು ಹಿರಿಯ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.