ಬಳ್ಳಾರಿ: ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಒಡೆತನದ ‘ಜಿ ಸ್ಕ್ವೇರ್’ ಬಡಾವಣೆಯ ಮಾಡೆಲ್ ಹೌಸ್ (ಮಾದರಿ ಮನೆ)ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಪೊಲೀಸರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರೂ ಸೇರಿದಂತೆ ಒಟ್ಟು 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಬಳ್ಳಾರಿ ವಲಯ ಐಜಿಪಿ ಡಾ. ಪಿ.ಎಸ್ ಹರ್ಷ ‘ಅಗ್ನಿ ಅವಘಡದ ಪ್ರಕರಣವನ್ನು ನಾವು ಬೇಧಿಸಿದ್ದೇವೆ. ಒಟ್ಟು 8 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಇದರಲ್ಲಿ ಕೆಲವರು ಅಪ್ರಾಪ್ತರಿದ್ದಾರೆ. ಅವರ ವಯಸ್ಸಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ. ವಿಚಾರಣೆ ಪೂರ್ಣಗೊಂಡ ಬಳಿಕ ಇತರ ಮಾಹಿತಿಯನ್ನು ತಿಳಿಸಲಾಗುವುದು’ ಎಂದು ಹೇಳಿದ್ದಾರೆ.

₹1.25 ಕೋಟಿ ನಷ್ಟ: ದೂರು

ಟಿ.ವಿ, ಚೇರು, ಸೋಫಾ ಸೆಟ್ಟುಗಳು, ಕಿಚನ್ ಸೆಟ್ಟುಗಳು, ಎ.ಸಿ, ಫ್ರಿಡ್ಜ್, ಮನೆಗೆ ಮಾಡಿಸಿದ್ದ ಪಿ.ಒ.ಪಿ, ಮರದ ಬಾಗಿಲುಗಳು ಸೇರಿ ಒಟ್ಟು ₹1.25 ಕೋಟಿ ನಷ್ಟವಾಗಿದೆ ಎಂದು ಜಿ ಸ್ಕ್ವೇರ್ ಬಡಾವಣೆಯ ಸೈಟ್ ಎಂಜಿನಿಯರ್ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದನ್ನು ಆಧರಿಸಿ ಪೊಲೀಸರು ಶುಕ್ರವಾರ ರಾತ್ರಿಯೇ ಎಫ್ಐಆರ್ ದಾಖಲು ಮಾಡಿದ್ದಾರೆ.
.ಬಳ್ಳಾರಿ: ಜನಾರ್ದನ ರೆಡ್ಡಿ ‘ಮಾಡೆಲ್ ಹೌಸ್’ಗೆ ಬೆಂಕಿ .ಬಳ್ಳಾರಿ | ಪಾತಾಳದಲ್ಲಿದ್ದರೂ ಭರತ್ನ ಬಿಡುವುದಿಲ್ಲ: ಶ್ರೀರಾಮುಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.