ಬೆಂಗಳೂರು: ಸಣ್ಣ ಸಣ್ಣ ಸಮಸ್ಯೆಗಳನ್ನು ಬಹುದೂರದಿಂದ ಹೊತ್ತು ತಂದಿದ್ದ ಜನರ ಅಹವಾಲುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಂತರವಾಗಿ ಆಲಿಸಿದರು.

ವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮ ಒಂದೂವರೆ ಗಂಟೆ ತಡವಾಗಿ ಆರಂಭವಾದರೂ ಜನರು ಸಮಾಧಾನದಿಂದ ಸರದಿಯಲ್ಲಿ ನಿಂತು ಅರ್ಜಿ ನೀಡಿದರು.

ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಿದ್ದರಾಮಯ್ಯ, ಸಾಮಾಜಿಕ ಸಮಾನತೆ ನಿರ್ಮಾಣದ ಹಾದಿಯಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದಾಗಿವೆ.

ಜನರ ಸಮಸ್ಯೆಗಳ ನಿವಾರಣೆಗೆ ವೇಗ ನೀಡಲು ಜನಸ್ಪಂದನ ಕಾರ್ಯಕ್ರಮ ದಾರಿಯಾಗಿದೆ. ಅಧಿಕಾರಿಗಳ ಜವಾಬ್ದಾರಿ ಹೆಚ್ಚಿಸಲಿದೆ ಎಂದರು.

ವಿರೋಧ ಪಕ್ಷಗಳಿಗೆ ಅಭಿವೃದ್ದಿಯ ಅರ್ಥವೇ ಗೊತ್ತಿಲ್ಲ. ಗ್ಯಾರಂಟಿ ಯೋಜನೆಗಳೂ ಅಭಿವೃದ್ಧಿಯ ಭಾಗ. ಜನರ ಆರ್ಥಿಕ ಸಮಸ್ಯೆಗಳಿಗೆ ನೇರ ಪರಿಹಾರ ಒದಗಿಸುವಲ್ಲಿ ಗ್ಯಾರಂಟಿಗಳು ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಹೇಳಿದರು.

ನವೆಂಬರ್ 27ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಅವರು ತಿಳಿಸಿದರು.

ಸರ್ಕಾರವನ್ನು ಜನರ ಬಳಿಗೇ ಒಯ್ಯಬೇಕೆಂಬುದು ಸರ್ಕಾರದ ಆಶಯ. ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ ಎಂದು ವಿವರಿಸಿದರು.

ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ. ಕಾನೂನುಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ ಪರಿಹಾರ ಒದಗಿಸಲಿದೆ. ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.