ಬೆಂಗಳೂರು: ಜನಿವಾರ ತೆಗೆಯದ ಕಾರಣಕ್ಕೆ ಕೆ-ಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಕುಲಕರ್ಣಿಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ (ಬಿಕೆಐಟಿ) ಉಚಿತ ಸೀಟು ನೀಡುವುದಾಗಿ ಘೋಷಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಭಿನಂದನೆ ಸಲ್ಲಿಸಿದೆ.

‘ಸಚಿವ ಈಶ್ವರ ಖಂಡ್ರೆ ಅವರು ಸುಚಿವ್ರತ್ ಅವರ ಮನೆಗೆ ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಿದ್ದಾರೆ. ಉಚಿತ ಸೀಟು ನೀಡುವುದಾಗಿಯೂ ಹೇಳಿದ್ದಾರೆ. ಜತೆಗೆ, ಮುಂದೆ ಇಂತಹ ಘಟನೆ ಮರುಕಳಿಸದ ರೀತಿ ಎಚ್ಚರಿಕೆ ವಹಿಸಿ ಎಂದು ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಅವರಿಗೆ ಅಭಿನಂದನೆ’ ಎಂದು ಮಹಾಸಭಾದ ಅಧ್ಯಕ್ಷ ಎಸ್.ರಘುನಾಥ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.