ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸುವ ಮೂಲಕ ಅವರ ಧಾರ್ಮಿಕ ಭಾವನೆಗಳು ಮತ್ತು ಹಕ್ಕುಗಳಿಗೆ ರಾಜ್ಯ ಸರ್ಕಾರ ಚ್ಯುತಿ ತಂದಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಬರೆದ ಪತ್ರದಲ್ಲಿ ದೂರಿದ್ದಾರೆ.

ಪ್ರತಿಯೊಬ್ಬ ನಾಗರಿಕನ ಸಂವಿಧಾನದತ್ತ ಹಕ್ಕುಗಳು ಮತ್ತು ಘನತೆಯನ್ನು ರಕ್ಷಿಸುವ ಉದ್ದೇಶದಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಈ ಪರೀಕ್ಷೆಯ ವೇಳೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಬುರ್ಕಾ ಮತ್ತು ಹಿಜಾಬ್ ಧರಿಸಲು ಅವಕಾಶ ನೀಡಲಾಗಿತ್ತು. ಆದರೆ ಜನಿವಾರ ಹೊಂದಿದವರನ್ನು ತಡೆದು ಪರೀಕ್ಷಿಸಿ, ತೆಗೆದು ಹಾಕಲು ತಾಕೀತು ಮಾಡಿದ್ದಾರೆ. ಎಲ್ಲ ಧರ್ಮೀಯರನ್ನು ಸಮಾನವಾಗಿ ನಡೆಸಿಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅಶೋಕ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾದರೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.