ಹರಿಹರ: ತಾಲ್ಲೂಕಿನ ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಅ.2ರಿಂದ 4ರವರೆಗೆ ಜನಜಾಗೃತಿ ಕಾರ್ಯಕ್ರಮ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಕುರಿತು ಜನಪ್ರತಿನಿಧಿಗಳ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪೀಠದ ಪ್ರಸನ್ನಾನಂದ ಸ್ವಾಮೀಜಿ ತಿಳಿಸಿದ್ದಾರೆ.

ಮಠದ ಆವರಣದಲ್ಲಿ ಅ.2ರಂದು ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ 2 ದಿನಗಳ ಜನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಕಾರ್ಯಕ್ರಮಕ್ಕೆ ಒಂದು ಸಾವಿರ ಜನರನ್ನು ಆಹ್ವಾನಿಸಲಾಗಿದೆ.

ಅ.4ರ ಬೆಳಿಗ್ಗೆ 10ರಿಂದ ಮಧ್ಯಾಹ್ನ2ರವರೆಗೆ ಸಾರಿಗೆ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಸಮಾಜದ ಶಾಸಕರು ಹಾಗೂ ಸಂಸದರ ಸಮ್ಮಖದಲ್ಲಿ ಎಸ್.ಟಿ. ಮೀಸಲಾತಿ ಹೆಚ್ಚಳದ ವಿಳಂಬದ ಕುರಿತು ಸಂವಾದ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.