ಜೆಡಿಎಸ್ ರಾಜ್ಯ ಘಟಕಕ್ಕೆ ನೂತನ ಅಧ್ಯಕ್ಷರನ್ನು ಪಕ್ಷವು ಶನಿವಾರ ಘೋಷಿಸುವ ಸಾಧ್ಯತೆ ಇದೆ. ಅಧ್ಯಕ್ಷ ಬದಲಾಗುತ್ತಾರೆ ಎಂಬುದರ ಬಗ್ಗೆ ಪಕ್ಷದಲ್ಲಿ ಚರ್ಚೆಗಳು ನಡೆಯುತ್ತಿವೆ. ಸಮಾವೇಶದ ಭಾಗವಾಗಿ ನಡೆಯಲಿರುವ ರಾಷ್ಟ್ರೀಯ ಪರಿಷತ್ ಮತ್ತು ರಾಜ್ಯ ಪರಿಷತ್ ಸಭೆಗಳಲ್ಲಿ ಈ ವಿಚಾರವನ್ನು ಚರ್ಚಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ. ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕು ಎಂದು ಪಕ್ಷದ ಹಲವು ನಾಯಕರು ಒತ್ತಾಯಿಸಿದ್ದಾರೆ. ಸಭೆಗಳಲ್ಲಿ ಈ ವಿಚಾರವನ್ನೂ ಚರ್ಚಿಸಲಾಗುತ್ತದೆ. ಸಭೆಯಲ್ಲೇ ಹೆಸರನ್ನು ಅಂತಿಮಗೊಳಿಸಿ ಶನಿವಾರದ ಕಾರ್ಯಕ್ರಮದಲ್ಲಿ ಘೋಷಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.