ಕಲಬುರಗಿ: ಜೆಡಿಎಸ್ ಪಕ್ಷದ ಹಿಂದುಳಿದ ವರ್ಗದ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಜಿಲ್ಲೆಯ ಶಿವಕುಮಾರ ನಾಟೀಕಾರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ನೇಮಿಸಿದ್ದಾರೆ.

ಶಿವಕುಮಾರ ನಾಟೀಕಾರ ಅವರ 15 ವರ್ಷಗಳ ನಿರಂತರ ಸಾರ್ವಜನಿಕ ಸೇವೆಯನ್ನು ಗುರುತಿಸಿ ಈ ಹಿಂದೆ ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಫಜಲಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಡಲಾಗಿತ್ತು. ಈಗ ಮತ್ತೆ ರಾಜ್ಯದಾದ್ಯಂತ ತಳಮಟ್ಟದಲ್ಲಿ ಪಕ್ಷವನ್ನು ಕಟ್ಟುವ ಜವಾಬ್ದಾರಿ ನೀಡಲಾಗಿದೆ.

ಭೀಮಾನದಿಯ ಉಳಿವಿಗಾಗಿ, ಈ ಹಿಂದೆ ಭೀಮಾ ನದಿ ಸಂಪೂರ್ಣ ಬತ್ತಿ ಕುಡಿಯುವ ನೀರಿಗೂ ಹಾಹಾಕಾರವಾದಾಗ ನಾಟೀಕಾರ ಅವರು ಮಾಡಿದ ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಸಿದ್ಧ ಯಾತ್ರಾಸ್ಥಳವಾದ ದೇವಲಗಾಣಗಾಪುರದ ದತ್ತಾತ್ರೇಯ ದೇವಸ್ಥಾನದ ಅಭಿವೃದ್ಧಿಗಾಗಿ ಮಾಡಿರುವ ಹೋರಾಟ ರಾಜ್ಯದ ಜನರ ಗಮನ ಸೆಳೆದಿದ್ದವು.

ಶಿವಕುಮಾರ ನಾಟೀಕಾರ ಅವರನ್ನು ಆಯ್ಕೆ ಮಾಡಿದ್ದಕ್ಕೆ ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಪಕ್ಷದ ಜಿಲ್ಲಾಧ್ಯಕ್ಷ ಬಾಲರಾಜ ಗುತ್ತೇದಾರ, ಅಫಜಲಪುರ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಸಿಂಗೆ ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-34-1761162293

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.