ಬೆಂಗಳೂರು: ‘ಲೋಕಸಭಾಧ್ಯಕ್ಷರು ಮತ್ತು ಅವರು ಅಲಂಕರಿಸಿರುವ ಪೀಠಕ್ಕೆ ಅಗೌರವ ತೋರಬಾರದು ಎನ್ನುವ ಕಾರಣಕ್ಕೆ ಓಂ ಬಿರ್ಲಾ ಅವರ ಭಾಷಣದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಾಜ್ಯದ ಸಂಸದೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿಧಾನಸಭಾಧ್ಯಕ್ಷರು ಲೋಕಸಭೆಯ ಸಭಾಧ್ಯಕ್ಷರನ್ನು ಕರೆಸಿದ್ದಾರೆ. ಇಂತಹ ಅಪರೂಪದ ಸಂದರ್ಭದಲ್ಲಿ ಗೈರಾಗುವುದು ಲೋಕಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದಂತೆ. ಆ ರೀತಿಆಗುವುದು ಬೇಡ ಮತ್ತು ಸಂಸದೀಯ, ಪ್ರಜಾಪ್ರಭುತ್ವದ ಮೌಲ್ಯಎತ್ತಿ ಹಿಡಿಯುವ ಏಕೈಕ ಉದ್ದೇಶದಿಂದ ಕಲಾಪದಲ್ಲಿ ನಮ್ಮ ಪಕ್ಷ ಭಾಗವಹಿಸಿತ್ತು’ ಎಂದರು.

‘ಕಾಂಗ್ರೆಸ್ ಪಕ್ಷದ ಸದಸ್ಯರು ಕಲಾಪ ಬಹಿಷ್ಕರಿಸಿದ್ದು, ಆ ಪಕ್ಷಕ್ಕೆ ಬಿಟ್ಟ ವಿಚಾರ. ನಮ್ಮ ಪಕ್ಷದ ನಿಲುವನ್ನು ನಾವು ತೆಗೆದುಕೊಂಡಿದ್ದೇವೆ’ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.ಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.