ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಾಸ್‌ ರೇಪ್ ಆರೋಪ: ರಾಹುಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜೆಡಿಎಸ್ ದೂರು

Published 22 ಮೇ 2024, 16:13 IST
Last Updated 22 ಮೇ 2024, 16:13 IST
ಅಕ್ಷರ ಗಾತ್ರ

ಬೆಂಗಳೂರು: ‘ಪ‍್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್‌ ರೇಪ್ ಮಾಡಿದ್ದಾರೆ ಎಂದು ಬಹಿರಂಗ ಸಭೆಯಲ್ಲಿ ಹೇಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು’ ಎಂದು ಜೆಡಿಎಸ್‌ ಆಗ್ರಹಿಸಿದೆ.

ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರನ್ನು ಬುಧವಾರ ಭೇಟಿ ಮಾಡಿದ ಜೆಡಿಎಸ್‌ ನಿಯೋಗ, ಈ ಕುರಿತು ದೂರು ಸಲ್ಲಿಸಿದೆ.   

ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಮಂಜೇಗೌಡ, ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ, ಜೆಡಿಎಸ್ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ.ರಂಗನಾಥ್ ನಿಯೋಗದಲ್ಲಿದ್ದರು.

‘ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಹುಲ್ ಗಾಂಧಿ ಅವರು ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಗಳಲ್ಲಿ ಮಾಸ್ ರೇಪ್ ಬಗ್ಗೆ ಹೇಳಿದ್ದರು. ಇದೇ ಮಾಹಿತಿಯನ್ನು ಮಾಧ್ಯಮಗಳ ಮುಂದೆಯೂ ನೀಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು  ಒತ್ತಾಯಿಸಿದೆ.

‘ಮಹಿಳೆಯರ ಮೇಲೆ ಮಾಸ್ ರೇಪ್ ಮಾಡಿದ್ದ ಪ್ರಜ್ವಲ್ ರೇವಣ್ಣ ಅದನ್ನು ವಿಡಿಯೊ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಇದು ಕೇವಲ ಅತ್ಯಾಚಾರ ಅಷ್ಟೇ ಅಲ್ಲ, ಇದೊಂದು ಸಾಮೂಹಿಕ ಅತ್ಯಾಚಾರ. ಒಬ್ಬ ಮಾಸ್ ರೇಪಿಸ್ಟ್ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮತ ಯಾಚಿಸಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ’ ಎಂದು ಮೇ 2ರಂದು ರಾಹುಲ್ ಗಾಂಧಿ ಹೇಳಿದ್ದಾಗಿ ನಿಯೋಗ ದೂರಿದೆ.

‘ನೊಂದ ಮಹಿಳೆಯರಿಗೆ ನ್ಯಾಯ ಕೊಡಿಸುವುದನ್ನು ಬಿಟ್ಟು ಒಬ್ಬ ಜನಪ್ರತಿನಿಧಿಯಾಗಿ ರಾಹುಲ್ ಗಾಂಧಿ ಅವರು ಇಂತಹ ಹೇಳಿಕೆ ನೀಡಿರುವುದು ಕಾನೂನು ಉಲ್ಲಂಘನೆಯಾಗಿದೆ. ಹೀಗಾಗಿ, ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 1860ರ ಅಡಿಯಲ್ಲಿ ಮೊಕದ್ದಮೆ ದಾಖಲಿಸಬೇಕು’ ಎಂದು ನಿಯೋಗ ಆಗ್ರಹಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT