‘ಚರ್ಚ್ ಮೇಲಿನ ದಾಳಿ ಖಂಡನೀಯ’
‘ದೇಶದ ಕೆಲವು ರಾಜ್ಯಗಳಲ್ಲಿ ಕ್ರಿಸ್‌ಮಸ್ ಆಚರಣೆ ವೇಳೆ ಚರ್ಚ್‌ಗಳ ಮೇಲೆ ದಾಳಿ ನಡೆದಿದೆ. ಇದು ಹೇಯ ಕೃತ್ಯ. ಇದನ್ನು ನಾವೆಲ್ಲರೂ ಖಂಡಿಸಬೇಕು’ ಎಂದು ದೇವೇಗೌಡ ಹೇಳಿದರು. ‘ಈ ದೇಶದಲ್ಲಿ ಎಲ್ಲ ಧರ್ಮದವರೂ ಇದ್ದಾರೆ. ಚರ್ಚ್ ಮೇಲೆ ದಾಳಿ ನಡೆಯಬಾರದಿತ್ತು. ಆದರೆ ಆಗಿದೆ. ದಾಳಿ ನಡೆಸಿದವರ ವಿರುದ್ಧ ಕ್ರಮತೆಗೆದುಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಚರ್ಚ್‌ಗೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ದಾಳಿಕೋರರ ಮೇಲೆ ಅವರು ಖಂಡಿತಾ ಕ್ರಮ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ’ ಎಂದರು.