ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನನ್ನನ್ನು ಮುಗಿಸಲಾಗದು: ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ

Published : 14 ಸೆಪ್ಟೆಂಬರ್ 2024, 16:02 IST
Last Updated : 14 ಸೆಪ್ಟೆಂಬರ್ 2024, 16:02 IST
ಫಾಲೋ ಮಾಡಿ
Comments

ಬೆಂಗಳೂರು: ‘ನನ್ನನ್ನು ಮೂರು ತಿಂಗಳು ಮನೆಯಲ್ಲೇ ಮಲಗಿಸಿಬಿಟ್ಟರು. ಮನೆಯಿಂದ ಹೊರಗೆ ಹೆಜ್ಜೆ ಇಡದಂತೆ ಮಾಡಿಬಿಟ್ಟಿದ್ದರು. ಆದರೆ ಇನ್ನು ಮುಂದೆ ಹಾಗೆ ಮಾಡಲು ಸಾಧ್ಯವಿಲ್ಲ. ನಾನು ಮಲಗುವುದಿಲ್ಲ’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದರು.

ಪಕ್ಷದ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನನ್ನನ್ನು ಮುಗಿಸಲು ಸಾಧ್ಯವಿಲ್ಲ. 62 ವರ್ಷಗಳ ಕಾಲ ಶಾಸಕ, ಸಂಸದ, ಸಚಿವ, ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿ ದುಡಿದಿದ್ದೇನೆ. ನಾನು ತಲೆಮರೆಸಿಕೊಳ್ಳುವಂತಹ ರಾಜಕಾರಣಿಯೇ’ ಎಂದು ಪ್ರಶ್ನಿಸಿದರು.

‘ಎನ್‌ಡಿಎ ಜತೆ ಮೈತ್ರಿ ಮಾಡಿಕೊಂಡಿದ್ದರಿಂದ ಜೆಡಿಎಸ್‌ಗೆ ಯಾವುದೇ ಧಕ್ಕೆ ಇಲ್ಲ. ಕಾರ್ಯಕರ್ತರ ಜತೆ ರಾಜ್ಯದಾದ್ಯಂತ ಓಡಾಡಿ ಪಕ್ಷ ಕಟ್ಟುತ್ತೇನೆ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT