ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಲಿನ ಭೀತಿಗೆ ಅಪಪ್ರಚಾರ: ಜೆಡಿಎಸ್‌ ಟೀಕೆ

Published 12 ಏಪ್ರಿಲ್ 2024, 16:15 IST
Last Updated 12 ಏಪ್ರಿಲ್ 2024, 16:15 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ ನಾಯಕರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೋಲಿನ ಭೀತಿಯಿಂದ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಜೆಡಿಎಸ್‌ ಟೀಕಿಸಿದೆ.

ಈ ಕುರಿತು ‘ಎಕ್ಸ್‌‘ನಲ್ಲಿ ಹೇಳಿಕೆ ನೀಡಿರುವ ಜೆಡಿಎಸ್‌ ರಾಜ್ಯ ಘಟಕ, ಸೋಲುವ ಭೀತಿಯಿಂದ ಕಾಂಗ್ರೆಸ್‌ ನಾಯಕರು ಜೆಡಿಎಸ್‌ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡಲಾತ್ತಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರನ್ನೇ ಜೆಡಿಎಸ್‌ ನಾಯಕರು ಎಂದು ಬಿಂಬಿಸುತ್ತಾ ಪಕ್ಷದ ಶಾಲು ಹಾಕಿಸಿ ಕಾಂಗ್ರೆಸ್‌ಗೆ ಸೇರುತ್ತಿದ್ದಾರೆ ಎಂದು ಬಿಂಬಿಸುತ್ತಿದ್ದಾರೆ ಎಂದು ದೂರಿದೆ.

ಸೋಲಿನ ಭೀತಿಯಿಂದ ಗಿಮಿಕ್‌ ಮಾಡುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸುಳ್ಳು ಹೇಳಿ ಅಪಪ್ರಚಾರ ಮಾಡುವುದನ್ನು ಕರಗತ ಮಾಡಿಕೊಂಡಿದ್ದಾರೆ. ಇಂತಹ  ಬುದ್ದಿಯನ್ನು ಬಿಡಬೇಕು. ಸುಳ್ಳು ಎಂದಿಗೂ ಸತ್ಯವಾಗದು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಅಕ್ರೋಶ ವ್ಯಕ್ತಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT