ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಪಟ್ಟಣ ರೈಲು ನಿಲ್ದಾಣ ಉನ್ನತೀಕರಣದ ಮೂಲಕ ಜನರ ಬಯಕೆ ಈಡೇರಿಕೆ: ಕುಮಾರಸ್ವಾಮಿ

Published 3 ಮಾರ್ಚ್ 2024, 15:44 IST
Last Updated 3 ಮಾರ್ಚ್ 2024, 15:44 IST
ಅಕ್ಷರ ಗಾತ್ರ

ಬೆಂಗಳೂರು: ‘ಸ್ಥಳೀಯ ಸಾಂಸ್ಕೃತಿಕ ಸೊಗಡಿನ ಮಾದರಿಯಲ್ಲಿ ಚನ್ನಪಟ್ಟಣ ರೈಲು ನಿಲ್ದಾಣವನ್ನು ₹ 20.93 ಕೋಟಿ ವೆಚ್ಚದಲ್ಲಿ ಹಾಗೂ ರಾಮನಗರ ರೈಲು ನಿಲ್ದಾಣವನ್ನು ₹ 20.96 ಕೋಟಿ ವೆಚ್ಚದಲ್ಲಿ ಉನ್ನತೀಕರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆ ಮೂಲಕ, ಈ ಭಾಗದ ಜನರ ಆಶೋತ್ತರಗಳನ್ನು ಈಡೇರಿಸುವ ಬೃಹತ್ ಪ್ರಯತ್ನ ಮಾಡಿದೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ‘X’ ಮಾಡಿರುವ ಅವರು, ‘ಸಾಂಸ್ಕೃತಿಕ ನಗರ ಮೈಸೂರು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಐತಿಹಾಸಿಕ, ಪಾರಂಪರಿಕ ಮಹತ್ವ ಇರುವ ರಾಮನಗರ, ಚನ್ನಪಟ್ಟಣ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ಪ್ರಧಾನಿ ನರೇಂದ್ರ ಮೋದಿ ಸಂಕಲ್ಪ ಮಾಡಿರುವುದು ಅತೀವ ಸಂತಸ ಉಂಟು ಮಾಡಿದೆ’ ಎಂದಿದ್ದಾರೆ.

‘ನಿತ್ಯವೂ ಉದ್ಯೋಗ, ವ್ಯವಹಾರಕ್ಕಾಗಿ ಎರಡೂ ನಗರಗಳ ನಡುವೆ ಸಂಚರಿಸುವ ಜಿಲ್ಲೆಯ ಜನರಿಗೆ ಇದರಿಂದ ಅನುಕೂಲವೂ ಆಗಲಿದೆ’ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT