ಕರ್ನಾಟಕದ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿರುವುದು ಸರ್ಕಾರವೇ ನೀಡಿರುವ ಅಂಕಿ ಅಂಶಗಳಿಂದ ಬಯಲಾಗಿದೆ. ಕರ್ನಾಟಕ, ಕನ್ನಡಿಗರ ವಿಚಾರದಲ್ಲಿ ಕೇಂದ್ರಕ್ಕೆ ಈ ಮಟ್ಟಿಗಿನ ತಾತ್ಸಾರ ಏಕೆ? ಇಲ್ಲಿ ಬಿಜೆಪಿಯದ್ದೇ ಸರ್ಕಾರ ಇರುವುದಕ್ಕೋ? ಅತಿ ಹೆಚ್ಚು ಸಂಸದರು ಆಯ್ಕೆಯಾಗಿರುವುದಕ್ಕೋ? ಅಥವಾ ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ? 2/8
ನ್ಯಾಯಾಲಯ ಹೇಳಿದ್ದ 1200MT ಬದಲಿಗೆ 120MT ಆಮ್ಲಜನಕ ಪೂರೈಸಿದ್ದಕ್ಕೆ ಮುಖ್ಯಮಂತ್ರಿ, ಕೇಂದ್ರದ ಸಚಿವರು, ಬಿಜೆಪಿ ಸಂಸದರು ಮುಗಿಬಿದ್ದು ಕೇಂದ್ರ, ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ನಮಗೆ ಸಿಗಬೇಕಾಗಿದ್ದರಲ್ಲಿ ಮುರಿದುಕೊಂಡು ಕೊಟ್ಟದ್ದಕ್ಕೆ ಧನ್ಯವಾದ ಏಕೆ? ಬಿಜೆಪಿ ನಾಯಕರು, ಬಿಜೆಪಿ ಬೆಂಬಲಿಗರು ಈ ಗುಲಾಮಗಿರಿ ಬಿಡಬೇಕು. 6/8