ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆರು ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಿದ್ದ ಜೆಡಿಎಸ್ ಕೇವಲ ಒಂದರಲ್ಲಿ ಗೆದ್ದಿದೆ. ಈ ಸೋಲಿನಿಂದ ಧೃತಿಗೆಡುವುದಿಲ್ಲ ಎಂದು ಹೇಳಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ವಿಧಾನಸಭೆ ಚುನಾವಣೆಯಲ್ಲಿ ಶಕ್ತಿ ಪ್ರದರ್ಶನ ಮಾಡುವುದಾಗಿ ಹೇಳಿದ್ದಾರೆ.

ಚುನಾವಣೆ ಫಲಿತಾಂಶದ ಸ್ಪಷ್ಟ ಚಿತ್ರಣ ಗೊತ್ತಾಗುತ್ತಲೇ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ನಾವು ಹಿನ್ನಡೆ ಅನುಭವಿಸಿದ್ದೇವೆ. ಆಣೆ, ಪ್ರಮಾಣಗಳ ನಡುವೆಯೂ ನೈತಿಕ ನೆಲೆಯಲ್ಲಿ ಸೆಣಸಿದ್ದೇವೆ,’ ಎಂದಿದ್ದಾರೆ.

‘2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ ಎಂದು ಹಿಂದೆಯೇ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ಆ ನಿಟ್ಟಿನಲ್ಲಿ ನಮ್ಮ ತಯಾರಿ ನಡೆದಿದೆ. ಆದರೂ ಈ ಚುನಾವಣೆಯಲ್ಲಿ ಪ್ರಯತ್ನ ಮಾಡಿದ್ದೇವೆ. ‘ದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ,‘ ಎಂದು ಅವರು ಹೇಳಿದ್ದಾರೆ.

‘ಚುನಾವಣೆ ಎಂದರೆ ಸೋಲು-ಗೆಲುವು. ಗೆಲುವಿಗಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅವರೇ ನಮ್ಮ ಶಕ್ತಿ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು. ಈಗ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಹಣಬಲದಿಂದ ಎದುರಾಗುವ ಇಂಥ ಸೋಲುಗಳಿಗೆ ಜೆಡಿಎಸ್ ಎಂದೂ ಧೃತಿಗೆಡುವುದಿಲ್ಲ,’ ಎಂದು ಅವರು ತಿಳಿಸಿದ್ದಾರೆ.

‘ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಈ ಚುನಾವಣೆಯ ಮತದಾರರು. ಜನರೇ ನೇರವಾಗಿ ಹಕ್ಕು ಚಲಾಯಿಸುವ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಶಕ್ತಿ ಏನೆಂಬುದು ತಿಳಿಯಲಿದೆ. ಪಕ್ಷ ಮತ್ತೆ ಪುಟಿದೆದ್ದು ಬರಲಿದೆ. ಜನರಲ್ಲಿ ಜೆಡಿಎಸ್ ಬಗೆಗಿನ ವಿಶ್ವಾಸವನ್ನು ಅಳಿಸಲಾಗದು,‘ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಈ ಚುನಾವಣೆಯಲ್ಲಿ ಗೆದ್ದ ಎಲ್ಲ ಅಭ್ಯರ್ಥಿಗಳಿಗೆ ಅವರು ಶುಭಾಶಯ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.