ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವೇಗೌಡರು ನನ್ನ ಶಕ್ತಿ, ಪ್ರೇರಣೆ: ಮಾಜಿ ಪ್ರಧಾನಿ ಜನ್ಮದಿನಕ್ಕೆ ಎಚ್‌ಡಿಕೆ ಶುಭಕೋರಿಕೆ

Published 18 ಮೇ 2023, 3:08 IST
Last Updated 18 ಮೇ 2023, 3:08 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ವರಿಷ್ಠ ಎಚ್‌. ಡಿ ದೇವೇಗೌಡ ಅವರಿಗೆ ಇಂದು 91ನೇ ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಶುಭಾಶಯ ಕೋರಿರುವ ಜೆಡಿಎಸ್‌ ನಾಯಕ ಎಚ್‌.ಡಿ ಕುಮಾರಸ್ವಾಮಿ, ದೇವೇಗೌಡರು ನಮ್ಮೆಲ್ಲರನ್ನು ಇನ್ನೂ ದೀರ್ಘಕಾಲ ಮುನ್ನಡೆಸಲೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ‘ಭಾರತದ 11ನೇ ಪ್ರಧಾನಮಂತ್ರಿಗಳು, ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ನನ್ನ ಪೂಜ್ಯ ತಂದೆಯವರಾದ ದೇವೇಗೌಡರಿಗೆ 91ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು ಹಾಗೂ ನನ್ನ ಭಕ್ತಿಪೂರ್ವಕ ಪ್ರಣಾಮಗಳು’ ಎಂದು ಬರೆದುಕೊಂಡಿದ್ದಾರೆ.

‘ನನ್ನ ಶಕ್ತಿ, ಪ್ರೇರಣೆ, ದಾರಿದೀಪ ಆಗಿರುವ ಅವರು, ಜೆಡಿಎಸ್‌ ಪಾಲಿನ ಮಹಾನ್ ಚೈತನ್ಯ. ದೇಶ ಮತ್ತು ಕನ್ನಡನಾಡಿಗೆ ಅವರ ಕೊಡುಗೆ ಅವಿಸ್ಮರಣೀಯ. ಅವರ ಅನುಭವಧಾರೆ ನಮಗೆಲ್ಲ ಅಮೃತಧಾರೆ. ಆ ಭಗವಂತ ಅವರಿಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಲಿ. ಅವರು ನಮ್ಮೆಲ್ಲರನ್ನು ಇನ್ನೂ ದೀರ್ಘಕಾಲ ಮುನ್ನಡೆಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.

ದೇವೇಗೌಡರ ಜನ್ಮ ದಿನವಾದ ಮೇ 18ಕ್ಕೆ ಜೆಡಿಎಸ್‌ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಎಚ್‌.ಡಿ ಕುಮಾರಸ್ವಾಮಿ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಹೇಳಿದ್ದರು. ಆದರೆ, ಚುನಾವಣೆಯಲ್ಲಿ ಜೆಡಿಎಸ್‌ಗೆ ಭಾರಿ ಹಿನ್ನಡೆ ಉಂಟಾಗಿದ್ದು, 19 ಸ್ಥಾನಗಳಿಗೆ ಕುಸಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT