ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಿರುದ್ಧ ಜೆಡಿಎಸ್ ನಾಯಕ ಸಾರಾ ಮಹೇಶ್ ಅವರುಟ್ವಿಟರ್‌ನಲ್ಲಿ ಟೀಕಾಪ್ರಹಾರ ನಡೆಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಮಹೇಶ್, ‘ಬೊಂಬಾಯಿ ಮಿಠಾಯಿ ವಿಶ್ವನಾಥ್' ಅವರ ನಾಲಿಗೆಗೆ ಇನ್ನೊಬ್ಬರನ್ನು ವ್ಯಕ್ತಿಗತವಾಗಿ ಜರಿಯುವ ಹಕ್ಕಾದರೂ ಇದೆಯಾ? ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ’ ಎಂದು ಕುಟುಕಿದ್ದಾರೆ.

ಮುಂದುವರಿದು, ಬೌದ್ಧಿಕ ದಿವಾಳಿತನಕ್ಕೆ ತುತ್ತಾದವರು ಮಾತ್ರ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ವ್ಯಕ್ತಿಗತ ಲೇವಡಿಗಿಳಿಯುತ್ತಾರೆ. ಅವರು ಎಂದೋ ಬಫೂನ್ ಆಗಿರುವುದನ್ನು ಮರೆತಿರುತ್ತಾರೆ. ಬೊಂಬಾಯಿ ಮಿಠಾಯಿ ರುಚಿ ಸವೆದಿದ್ದು ಮಂತ್ರಿಯಾಗುವ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತವಿರಲಿ. ಇಲ್ಲವಾದರೆ ತಕ್ಕ ಶಾಸ್ತಿ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.