‘ಸ್ಥಳೀಯ ಕಾಂಗ್ರೆಸ್ ನಾಯಕರು ಸಹಕಾರ ನೀಡುತ್ತಾರೋ ಇಲ್ಲವೋ, ಪಕ್ಷದ ಎಲ್ಲ ಮುಖಂಡರು ಗರಿಷ್ಠ ಪ್ರಯತ್ನ ಹಾಕಿ ಇಬ್ಬರೂ ಅಭ್ಯರ್ಥಿಗಳನ್ನು ದಾಖಲೆಯ ಮತಗಳ ಅಂತರದಿಂದ ಗೆಲ್ಲಿಸಬೇಕು’ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾರ್ಯಕರ್ತರಿಗೆ ತಾಕೀತು ಮಾಡಿದ್ದಾರೆ ಎಂದು ಮೂಲಗಳು ಹೇಳಿವೆ.