ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗೃಹ ಸಚಿವ ಕಚೇರಿ ಮುಂದೆ ಪ್ರತಿಭಟನೆ: ಜೆಡಿಎಸ್‌

Published 24 ನವೆಂಬರ್ 2023, 15:43 IST
Last Updated 24 ನವೆಂಬರ್ 2023, 15:43 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಪೋಸ್ಟರ್ ಅಂಟಿಸಿದ ಆರೋಪಿಗಳನ್ನು ಬಂಧಿಸದಿದ್ದರೆ ಗೃಹ ಸಚಿವರ ವಿಧಾನಸೌಧದ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಜೆಡಿಎಸ್‌ ಮುಖಂಡರು ಹೇಳಿದರು.

ಈ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್‌ ಗೌಡ, ವಿಧಾನ ಪರಿಷತ್‌ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ರಾಜ್ಯದ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್‌ ಅವರು, ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್‌ ಭ್ರಷ್ಟಾಚಾರವನ್ನು ಬಯಲಿಗೆಳೆದ ಕಾರಣಕ್ಕೆ ಕುಮಾರಸ್ವಾಮಿ ವಿರುದ್ಧ ಜೆಡಿಎಸ್‌ ಕಚೇರಿಯ ಆವರಣದಲ್ಲೇ ಪೋಸ್ಟರ್‌ ಅಂಟಿಸಿದ್ದಾರೆ. ವೈಯಕ್ತಿಕ ತೇಜೋವಧೆ, ವ್ಯಕ್ತಿ ನಿಂದನೆ ಮಾಡಲಾಗಿದೆ. ಇಂತಹ ಕೃತ್ಯದ ವಿರುದ್ಧ ಶ್ರೀರಾಂಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ, ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

‘ಆರೋಪಿ ಮನೋಹರ್‌ ಜೆಡಿಎಸ್‌ ನಾಯಕರ ವಿರುದ್ಧ ಮತ್ತೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಪೋಸ್ಟರ್‌ ಅಂಟಿಸಿದ್ದು ನಾನೇ ಎಂದು ರಾಜಾರೋಷವಾಗಿ ಹೇಳಿಕೊಂಡಿದ್ದಾರೆ. ತಕ್ಷಣ ಕ್ರಮಕೈಗೊಳ್ಳದಿದ್ದರೆ ಹೋರಾಟ ನಡೆಸಲಾಗುವುದು’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT