ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

3ರಂದು ಹಾಸನ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಅಂತಿಮ: ಎಚ್‌ಡಿಕೆ

ಕುರೇಕುಪ್ಪದಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷ ನಾಯಕ ಎಚ್‌ಡಿಕೆ ಹೇಳಿಕೆ
Last Updated 31 ಜನವರಿ 2023, 18:48 IST
ಅಕ್ಷರ ಗಾತ್ರ

ಬಳ್ಳಾರಿ: ‘ಹಾಸನದ ಏಳು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಫೆ.3ರಂದು ಸಮಸ್ಯೆಗಳಿಲ್ಲದೆ ಅಂತಿಮಗೊಳಿಸಲಾಗುವುದು, ತಮ್ಮ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಫೆ. 10 ರಂದು ಬಿಡುಗಡೆ ಮಾಡಲಾಗುವುದು’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

‘ನಮ್ಮ ಕುಟುಂಬದಲ್ಲಿ ಕೋಲ್ಡ್‌ ವಾರೂ ಇಲ್ಲ; ಹಾಟ್‌ ವಾರೂ ಇಲ್ಲ. ಹಾಸನದ 7 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಗೆ ಸುಗಮವಾಗಿ ಒಪ್ಪಿಗೆ ದೊರೆಯಲಿದೆ’ ಎಂದು ಸಂಡೂರು ತಾಲ್ಲೂಕಿನ ಕುರೇಕುಪ್ಪದಲ್ಲಿ ಮಂಗಳವಾರ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಪ್ರತಿ ಪಕ್ಷದಲ್ಲೂ ಆಯಾ ಪಕ್ಷದ ಬೆಳವಣಿಗೆಗಿಂತ ಹೆಚ್ಚಾಗಿ ಅವರವರ ಕುಟುಂಬದ, ಮಕ್ಕಳ ಬೆಳವಣಿಗೆ ಕುರಿತು ಚಿಂತನೆ ನಡೆಯುತ್ತಿದೆ. ನಮ್ಮ ಕುಟುಂಬವನ್ನು 30 ವರ್ಷಗಳಿಂದ ಟಾರ್ಗೆಟ್‌ ಮಾಡಲಾಗುತ್ತಿದೆ. ಜೆಡಿಎಸ್‌ಗೆ ಕುಟುಂಬ ರಾಜಕಾರಣದ ಲೇಬಲ್‌ ಹಚ್ಚಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT