ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಂದಾಲ್‌ಗೆ ಜಮೀನು: ಪಿಐಎಲ್‌ ವಜಾ

Last Updated 9 ನವೆಂಬರ್ 2021, 19:31 IST
ಅಕ್ಷರ ಗಾತ್ರ

ಬೆಂಗಳೂರು: ವಿಜಯನಗರ ಜಿಲ್ಲೆಯ ಸಂಡೂರಿನಲ್ಲಿ ಜಿಂದಾಲ್ ಸೌತ್‌ವೆಸ್ಟ್ ಸ್ಟೀಲ್ ಕಾರ್ಪೊರೇಷನ್ ಲಿಮಿಟೆಡ್ ಕಂಪನಿಗೆ 3,667 ಎಕರೆ ಸರ್ಕಾರಿ ಜಮೀನನ್ನು ಹಸ್ತಾಂತರಿಸುವ ರಾಜ್ಯ ಸಚಿವ ಸಂಪುಟದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಈ ಸಂಬಂಧ ಬೆಂಗಳೂರಿನ ಕೆ.ಎ. ಪಾಲ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ‘ಪ್ರಕರಣ ಮುಖ್ಯಮಂತ್ರಿಗಳ ಮುಂದೆ ಮರು ಪರಿಶೀಲನೆಯಲ್ಲಿದೆ’ ಎಂಬ ಹೇಳಿಕೆಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡು ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವ ಸರ್ಕಾರದ ಅವಧಿಯಲ್ಲಿ 2021ರ ಏಪ್ರಿಲ್‌ 26ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಜಿಂದಾಲ್‌ ಕಂಪನಿಗೆಸಂಡೂರು ತಾಲ್ಲೂಕಿನಲ್ಲಿ 3,667 ಎಕರೆ ಭೂಮಿಯನ್ನು ಜಿಂದಾಲ್ ಸಂಸ್ಥೆಗೆ ಹಸ್ತಾಂತರಿಸಲು ನಿರ್ಧರಿಸಿತ್ತು.

‘ಜಮೀನು ಪರಭಾರೆ ನಿರ್ಧಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ವತಿಯಿಂದ ಸ್ವತಂತ್ರ ಸಂಸ್ಥೆ ನೇಮಿಸಬೇಕು. ಆ ಸಂಸ್ಥೆಯಿಂದ ವರದಿ ತರಿಸಿಕೊಳ್ಳಬೇಕು’ ಎಂದು ಅರ್ಜಿದಾರರು ಕೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT