ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಷರತ್ತುಬದ್ಧ ಜಾಮೀನು

Published 8 ಡಿಸೆಂಬರ್ 2023, 16:08 IST
Last Updated 8 ಡಿಸೆಂಬರ್ 2023, 16:08 IST
ಅಕ್ಷರ ಗಾತ್ರ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 11ನೇ ಆರೋಪಿ ಎನ್.ಮೋಹನ್ ನಾಯಕ್‌ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಕುರಿತಂತೆ ಮೋಹನ್ ನಾಯಕ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ (ಡಿ.7) ಪುರಸ್ಕರಿಸಿದೆ.

'₹ 1 ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್ ಹಾಗೂ ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ಪ್ರತಿ ವಿಚಾರಣೆಗೂ ನ್ಯಾಯಾಲಯಕ್ಕೆ ಹಾಜರಾಗಬೇಕು. ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ಇಂಥದ್ದೇ ಪ್ರಕರಣದಲ್ಲಿ ಭಾಗಿಯಾಗುವಂತಿಲ್ಲ' ಎಂಬ ಷರತ್ತುಗಳನ್ನು ನ್ಯಾಯಪೀಠ ವಿಧಿಸಿದೆ.

ಈ ಪ್ರಕರಣದಲ್ಲಿ ಮೋಹನ್ ನಾಯಕ್ ಜಾಮೀನು ಪಡೆದ ಮೊದಲ ಆರೋಪಿ ಎನಿಸಿದ್ದಾರೆ. ಮೋಹನ್ ನಾಯಕ್ ಪರ ಹೈಕೋರ್ಟ್ ವಕೀಲ ಅಮರ್ ಕೊರಿಯಾ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT