ಬೆಂಗಳೂರು: ಪತ್ರಕರ್ತ, ‘ಮಲಯಾಳ ಮನೋರಮಾ’ ಮತ್ತು ‘ದಿ ವೀಕ್’ ಪತ್ರಿಕೆಗಳ ಸ್ಥಾನೀಯ ಸಂಪಾದಕರಾಗಿದ್ದ ಕೆ.ಎಸ್. ಸಚ್ಚಿದಾನಂದಮೂರ್ತಿ (66) ಶುಕ್ರವಾರ ನಿಧನರಾದರು.

ಸಚ್ಚಿದಾನಂದಮೂರ್ತಿ ದೆಹಲಿಯ ಮಾಧ್ಯಮರಂಗದಲ್ಲಿ ಸಕ್ರಿಯರಾಗಿದ್ದ ಕೆಲವೇ ಕೆಲವು ಕನ್ನಡಿಗ ಪತ್ರಕರ್ತರಲ್ಲಿ ಒಬ್ಬರಾಗಿದ್ದರು. ರಾಜ್ಯ-ರಾಷ್ಟ್ರಗಳ ವಿದ್ಯಮಾನಗಳ ಬಗ್ಗೆ ಅಪಾರವಾದ ಜ್ಞಾನ ಹೊಂದಿದ್ದರು.

ಶೇಷಾದ್ರಿಪುರದ ಆಸ್ಪತ್ರೆಯಿಂದ ಜಯನಗರದಲ್ಲಿ ಇರುವ ಅವರ ಮನೆಗೆ ಪಾರ್ಥೀವ ಶರೀರ ಒಯ್ದ ಬಳಿಕ ಸಂಜೆ ಬನಶಂಕರಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಅವರು ಇತ್ತೀಚೆಗೆ ಶ್ವಾಸಕೋಶದ ಕಸಿಗೆ ಒಳಗಾಗಿದ್ದರು. ಆ ನಂತರ ಅವರ ಆರೋಗ್ಯ ಹದಗೆಟ್ಟಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.