ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪತ್ರಕರ್ತರು ಸುಳ್ಳು ಸುದ್ದಿಗಳನ್ನು ನಿಯಂತ್ರಿಸಬೇಕು: ಸಿಎಂ ಸಿದ್ದರಾಮಯ್ಯ

Published 1 ಜುಲೈ 2024, 8:28 IST
Last Updated 1 ಜುಲೈ 2024, 8:28 IST
ಅಕ್ಷರ ಗಾತ್ರ

ಬೆಂಗಳೂರು: ‘ಸುಳ್ಳು ಸುದ್ದಿಗಳನ್ನು ಪರಿಶೀಲಿಸುವ ಮತ್ತು ನಿಯಂತ್ರಿಸುವ ಕೆಲಸವನ್ನು ಪತ್ರಕರ್ತರು ಮಾಡಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪತ್ರಕರ್ತರ ದಿನಾಚರಣೆ ಅಂಗವಾಗಿ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಲಾಗಿದ್ದ, ‘ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ’ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಾರ್ತಾ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು ಪ್ರೆಸ್‌ ಕ್ಲಬ್‌ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

‘ಸಾಮಾಜಿಕ ಜಾಲತಾಣಗಳಿಂದ ಉಪಯೋಗವೂ ಇದೆ. ಅಪಾಯವೂ ಇದೆ. ಸತ್ಯವಾದ ಸುದ್ದಿಗಳನ್ನು ಹಂಚಿಕೊಳ್ಳಲು ಬಳಕೆ ಮಾಡಿಕೊಂಡರೆ ಸಾಮಾಜಿಕ ಜಾಲತಾಣಗಳಿಂದ ಉಪಯೋಗವಾಗುತ್ತದೆ. ಆದರೆ ಅವನ್ನು ಸುಳ್ಳು ಸುದ್ದಿ ಮತ್ತು ತಪ್ಪು ಮಾಹಿತಿಗಳನ್ನು ಹರಡಲು ಬಳಸಿಕೊಂಡರೆ ಅಪಾಯ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳೇ ಹೆಚ್ಚು ಹಂಚಿಕೆಯಾಗುತ್ತಿದೆ. ಹೀಗಾಗಿ ನಾನು ಅವನ್ನು ನೋಡುವುದನ್ನೇ ಬಿಟ್ಟಿದ್ದೇನೆ’ ಎಂದು ಅವರು ಹೇಳಿದರು.

‘ಸುಳ್ಳು ಸುದ್ದಿ ನಿಯಂತ್ರಣಕ್ಕೆ ನಮ್ಮ ಸರ್ಕಾರ ಕ್ರಮ ತೆಗೆದುಕೊಂಡಿದೆ. ಫ್ಯಾಕ್ಟ್‌ಚೆಕ್ ಘಟಕಗಳನ್ನು ಆರಂಭಿಸಿದ್ದೇವೆ. ಪತ್ರಕರ್ತರೂ ಫ್ಯಾಕ್ಟ್‌ಚೆಕ್‌ ಮಾಡಬೇಕು’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT