ಬೆಂಗಳೂರು: ರಾಜ್ಯದ ಕೆಲವು ಭಾಗಗಳಲ್ಲಿ ಪಕ್ಷ ದುರ್ಬಲವಾಗಿದ್ದು, ಅಲ್ಲಿ ಒಂದು ವರ್ಷದೊಳಗೆ ಸಂಘಟನೆ ಬಲಗೊಳಿಸುವ ಕಾರ್ಯಸೂಚಿ ಸಿದ್ಧಪಡಿಸಿಕೊಂಡು ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯ ಘಟಕಕ್ಕೆ ಗುರಿ ನೀಡಿದ್ದಾರೆ.

ಶನಿವಾರ ನಡೆದ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ದೆಹಲಿಯಿಂದ ವಿಡಿಯೊ ಸಂವಾದದ ಮೂಲಕ ಮಾತನಾಡಿದ ಅವರು, ಕೆಲವು ಭಾಗಗಳಲ್ಲಿ ಪಕ್ಷ ಅತ್ಯಂತ ಬಲಿಷ್ಠವಾಗಿದೆ. ಆದರೆ, ಹಳೆ ಮೈಸೂರು ಪ್ರದೇಶ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆ ದುರ್ಬಲವಾಗಿದೆ ಎಂದು ಅಭಿಪ್ರಾಯಪಟ್ಟರು.

'ಪದಾಧಿಕಾರಿಗಳು ಹಾಗೂ ಸರ್ಕಾರದ ಸಚಿವರು ಈ ಭಾಗದತ್ತಲೇ ತಮ್ಮ ಗಮನ ಕೇಂದ್ರೀಕರಿಸಬೇಕು. ಮತಗಟ್ಟೆ ಸಮಿತಿ, ಶಕ್ತಿಕೇಂದ್ರ, ಮಂಡಲ ಸಮಿತಿ ಸೇರಿದಂತೆ ಎಲ್ಲ ಹಂತಗಳಲ್ಲಿ ಪಕ್ಷದ ಬಲವರ್ಧನೆ ಮಾಡಬೇಕು. ಒಂದು ವರ್ಷದ ಕಾರ್ಯಕ್ರಮವನ್ನು ಇದಕ್ಕಾಗಿ ರೂಪಿಸಿ' ಎಂದು ತಾಕೀತು ಮಾಡಿದರು.

ಮತಗಟ್ಟೆ ಮಟ್ಟದಲ್ಲಿರುವ ವಾಟ್ಸ್ಆ್ಯಪ್ ಗ್ರೂಪ್ಗಳನ್ನು ಹೊಸದಾಗಿ ರಚನೆ ಮಾಡಿ ಮತ್ತೆ ಅದು ಕ್ರಿಯಾಶೀಲವಾಗುವಂತೆ ಮಾಡಬೇಕು. ಪಕ್ಷದ ಐ.ಟಿ. ಸೆಲ್ಗಳನ್ನು ಚುರುಕುಗೊಳಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಕರ್ನಾಟಕದಲ್ಲಿ ಮೊದಲ ಬಾರಿಗೆ ಅನುಭವಸ್ಥ ಹಿರಿಯರು ಹಾಗೂ ಉತ್ಸಾಹಿ ಕಿರಿಯರು ಇರುವ ಪದಾಧಿಕಾರಿಗಳ ತಂಡ ರಚನೆಯಾಗಿದೆ. ಹಿರಿಯರು ಅನುಭವ ಧಾರೆ ಎರೆದು, ಕಿರಿಯರು ಅದನ್ನು ಸ್ವೀಕರಿಸಿ ಪಕ್ಷವನ್ನು ಬಲಿಷ್ಠವಾಗಿ ಬೆಳೆಸುವಲ್ಲಿ ಒಂದಾಗಿ ದುಡಿಯಬೇಕು ಎಂದು ಹೇಳಿದರು.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪಾಧ್ಯಕ್ಷರಾದ ನಿರ್ಮಲ್ಕುಮಾರ್ ಸುರಾನ, ಮಾಲೀಕಯ್ಯ ಗುತ್ತೇದಾರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.