ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ 3,667 ಎಕರೆ ಜಮೀನನ್ನು ಜೆಎಸ್‌ಡಬ್ಲ್ಯು ಕಂಪನಿಗೆ ಮಾರಾಟ ಮಾಡುವ ಪ್ರಕ್ರಿಯೆಗೆ ನೀಡಿರುವ ಯಥಾಸ್ಥಿತಿ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ.

ಹೊಸ ಸಚಿವ ಸಂಪುಟ ರಚನೆ ಆಗಿರುವುದರಿಂದ ಹೊಸದಾಗಿ ಅಫಿಡವಿಟ್ ಸಲ್ಲಿಸಲು ಸರ್ಕಾರದ ಪರ ವಕೀಲರು ಕಾಲಾವಕಾಶ ಕೋರಿದರು. ಏಪ್ರಿಲ್ 26ರ ಸಂಪುಟ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಿದ್ದರೂ, ಬಳಿಕ ನಡೆದ ಸಭೆಗಳಲ್ಲಿ ಅದನ್ನು ಖಚಿತಪಡಿಸಿಲ್ಲ ಎಂದು ವಿವರಿಸಿದರು.

ಯಥಾಸ್ಥಿತಿ ಕಾಯ್ದುಕೊಳ್ಳುವ ಬಗ್ಗೆ ಸರ್ಕಾರ ಭರವಸೆ ನೀಡಿದ ಬಳಿಕ ವಿಚಾರಣೆಯನ್ನು ಪೀಠ ಆ.31ಕ್ಕೆ ಮುಂದೂಡಿತು. ‘ಸಂಪುಟದ ಹಲವು ಸಚಿವರ ವಿರೋಧ ಇದ್ದರೂ ಕಡಿಮೆ ದರದಲ್ಲಿ ಸರ್ಕಾರದ ಜಾಗವನ್ನು ಜೆಎಸ್‌ಡಬ್ಲ್ಯು ಕಂಪನಿಗೆ ಮಾರಾಟ ಮಾಡಲು ಸರ್ಕಾರ ಹೊರಟಿದೆ’ ಎಂದು ಕೆ.ಎ. ಪಾಲ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.