ಬೆಂಗಳೂರು: ಗಡಿಪಾರು ಆದೇಶ ಪ್ರಶ್ನಿಸಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯಿಂದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರು ಹಿಂದೆ ಸರಿದಿದ್ದಾರೆ.

‘ಈ ಅರ್ಜಿ ವಿಚಾರಣೆಯಿಂದ ನಾನು ಹಿಂದೆ ಸರಿಯುತ್ತಿದ್ದೇನೆ’ ಎಂದಷ್ಟೇ ಉಲ್ಲೇಖಿಸಿರುವ ನ್ಯಾಯಮೂರ್ತಿಯವರು, ಈ ಅರ್ಜಿಯನ್ನು ಬೇರೊಂದು ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸುವಂತೆ ರಿಜಿಸ್ಟ್ರಾರ್ ಜನರಲ್ ಅವರಿಗೆ ಸೂಚಿಸಿದ್ದಾರೆ.

‘ನನ್ನನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 9 ತಿಂಗಳ ಕಾಲ ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ 2025ರ ಡಿಸೆಂಬರ್ 16ರಂದು ಹೊರಡಿಸಿರುವ ಆದೇಶ ರದ್ದುಗೊಳಿಸಬೇಕು’ ಎಂದು ಮಹೇಶ್ ಶೆಟ್ಟಿ ತಿಮರೋಡಿ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.