ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್. ದಿನೇಶ್ ಕುಮಾರ್ ನೇಮಕ

Published 31 ಜನವರಿ 2024, 16:12 IST
Last Updated 31 ಜನವರಿ 2024, 16:19 IST
ಅಕ್ಷರ ಗಾತ್ರ

ನವದೆಹಲಿ: ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬುಧವಾರ ನೇಮಕ ಮಾಡಲಾಗಿದೆ. ಅವರು ಫೆಬ್ರುವರಿ 24ರಂದು ಕರ್ತವ್ಯದಿಂದ ನಿವೃತ್ತರಾಗಲಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅವರ ಅಧಿಕಾರ ಅವಧಿ ಒಂದು ತಿಂಗಳಿಗೂ ಮೊದಲೇ ಕೊನೆಗೊಳ್ಳಲಿದೆ.

ನ್ಯಾಯಮೂರ್ತಿ ಕುಮಾರ್ ಅವರು ಈಗ ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದ ಪ್ರಸನ್ನ ಬಿ. ವರಾಳೆ ಅವರು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಈಚೆಗೆ ಪದೋನ್ನತಿ ಪಡೆದಿದ್ದಾರೆ.

ನ್ಯಾಯಮೂರ್ತಿ ಕುಮಾರ್ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಜನವರಿ 19ರಂದು ಶಿಫಾರಸು ಮಾಡಿತ್ತು. ಕಡಿಮೆ ಸೇವಾವಧಿ ಹೊಂದಿದವರನ್ನು ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿ ಆಗಿ ನೇಮಕ ಮಾಡಿದ ನಿದರ್ಶನಗಳು ಈ ಹಿಂದೆಯೂ ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT