ನವದೆಹಲಿ: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಎನ್.ವಿ.ಅಂಜಾರಿಯಾ (ಕರ್ನಾಟಕ), ವಿಜಯ್ ಬಿಷ್ಣೋಯ್ (ಗುವಾಹಟಿ) ಹಾಗೂ ಎ.ಎಸ್.ಚಂದೂರ್ಕರ್ (ಬಾಂಬೆ) ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಮೂವರು ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಐವರು ಸದಸ್ಯರ ಕೊಲಿಜಿಯಂ ಸೋಮವಾರ ಶಿಫಾರಸು ಮಾಡಿತ್ತು. ಇದಕ್ಕೆ ಕೇಂದ್ರ ಸರ್ಕಾರ ಗುರುವಾರ ಅನುಮೋದನೆ ನೀಡಿದೆ. ಈ ಮೂಲಕ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 34ಕ್ಕೆ ಏರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.