ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರ್ಗೆ, ವೇಣುಗೋಪಾಲ್ ಜೊತೆ ಸಭೆ: ಎಲ್ಲಾ ಬಿಚ್ಚಿಡ್ತೀವಿ ಎಂದ ಡಿ.ಕೆ. ಶಿವಕುಮಾರ್

Published 16 ಅಕ್ಟೋಬರ್ 2023, 7:06 IST
Last Updated 16 ಅಕ್ಟೋಬರ್ 2023, 7:06 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಕ್ಕೆ ದಿಢೀರ್ ಬಂದಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆ ಸೋಮವಾರ ಬೆಳಿಗ್ಗೆ ಚರ್ಚೆ ನಡೆಸಿದರು.

ತಡರಾತ್ರಿ ಬೆಂಗಳೂರಿಗೆ ಬಂದಿರುವ ವೇಣುಗೋಪಾಲ್ ಅವರು ಬೆಳಗ್ಗಿನ ಉಪಾಹಾರ ನೆಪದಲ್ಲಿ ಎಐಸಿಸಿ ಅಧ್ಯಕ್ಷರ ಮನೆಗೆ ತೆರಳಿದರು. ಅಲ್ಲಿಗೆ ಡಿ.ಕೆ. ಶಿವಕುಮಾರ್ ಕೂಡ ಬಂದರು. ಮೂವರೂ ಕೆಲಹೊತ್ತು ರಹಸ್ಯವಾಗಿ ಮಾತುಕತೆ ನಡೆಸಿದರು. ಈ ಸಭೆ ಕುತೂಹಲ ಮೂಡಿಸಿದೆ.

ಮೂವರು ನಾಯಕರು ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು. ಐಟಿ ದಾಳಿ, ವಿರೋಧ ಪಕ್ಷಗಳ ಕಮಿಷನ್ ಆರೋಪ ಸೇರಿದಂತೆ ಹಲವು ವಿಚಾರಗಳ ಬಗ್ಗೆಯೂ ಸಮಾಲೋಚನೆ ನಡೆಸಿದರು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಸಭೆಯ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್, 'ಯಾರ್ಯಾರಿಗೆ ಏನೇನು ಉತ್ತರ ಕೊಡಬೇಕೋ ಖಂಡಿತ ಕೊಡ್ತೇನೆ. ಹೈ ವೋಲ್ಟೇಜ್‌ಗೂ ಕೊಡ್ತೀನಿ, ಲೋ ವೋಲ್ಟೇಜ್‌ಗೂ ಕೊಡ್ತೀನಿ. ನಕಲಿಗಳಿಗೂ ಕೊಡ್ತೀನಿ, ಲೂಟಿಗಳಿಗೂ ಕೊಡ್ತೀನಿ, ಎಲ್ಲರಿಗೂ ಕೊಡ್ತೀನಿ. ಸ್ವಲ್ಪ ಕಾಯಿರಿ' ಎಂದರು.

ಬಿಜೆಪಿಯವರು ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್, 'ಅವರು ಪ್ರತಿಭಟನೆ ಮಾಡಲಿ. ಅವರು ಪ್ರತಿಭಟನೆ ಮಾಡಬೇಕು, ಪ್ರತಿಭಟನೆ ಮಾಡಿದರೆ ಅವರ ಲೂಟಿ ಜನರಿಗೆ ತಿಳಿಯುವುದು. ಎಲ್ಲಾ ಬಿಚ್ಚಿಡ್ತೀವಿ' ಎಂದು ವೇಣುಗೋಪಾಲ್ ಜೊತೆ ತೆರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT