ಹುಬ್ಬಳ್ಳಿ: ವಿಶ್ವಕರ್ಮ ಸಮಾಜದ ಮುಖಂಡ ಕೆ.ಪಿ. ನಂಜುಂಡಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಇಲ್ಲಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಮಂಗಳವಾರ ಬೆಳಿಗ್ಗೆ ಬಂದು, ರಾಜೀನಾಮೆ ಸಲ್ಲಿಸಿದರು.

ನಿರ್ಲಕ್ಷಿಸಿದ ಬಿಜೆಪಿ:

'ಬಿಜೆಪಿ ನನ್ನನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಜವಾಬ್ದಾರಿ, ಸ್ಥಾನ ನೀಡಲಿಲ್ಲ. ಸಂಪೂರ್ಣವಾಗಿ ನಿರ್ಲಕ್ಷಿಸಿತು. ಇದರಿಂದ ಬೇಸರವಾಗಿ ಎಂ.ಎಲ್.ಸಿ ಸ್ಥಾನಕ್ಕೆ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ' ಎಂದು ಕೆ.ಪಿ.ನಂಜುಂಡಿ ಹೇಳಿದರು.

ನಾಳೆ ಕಾಂಗ್ರೆಸ್ ಸೇರ್ಪಡೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಬುಧವಾರ ಕಾಂಗ್ರೆಸ್ ಗೆ ಸೇರ್ಪಡೆ ಯಾಗಲಿದ್ದೇನೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.