ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೆ-ಸೆಟ್‌: ನಾಳೆಯಿಂದ ದಾಖಲಾತಿ ಪರಿಶೀಲನೆ

Published 9 ಜುಲೈ 2024, 15:43 IST
Last Updated 9 ಜುಲೈ 2024, 15:43 IST
ಅಕ್ಷರ ಗಾತ್ರ

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷಾ (ಕೆ-ಸೆಟ್‌) ಫಲಿತಾಂಶದ ತಾತ್ಕಲಿಕ ಪಟ್ಟಿಯಲ್ಲಿರುವ ಅರ್ಹ ಅಭ್ಯರ್ಥಿಗಳ ದಾಖಲಾತಿ ಪರಿಶೀಲನಾ ಕಾರ್ಯ ಜುಲೈ 11ರಿಂದ 22ರವರೆಗೆ ನಡೆಯಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಕ್ರಮ ಸಂಖ್ಯೆ ಆಧಾರಿತ ವೇಳಾಪಟ್ಟಿಯಂತೆ ಮಲ್ಲೇಶ್ವರದಲ್ಲಿರುವ ಕೆಇಎ ಕಚೇರಿಗೆ ನಿಗದಿತ ದಿನ ಹಾಗೂ ಸಮಯಕ್ಕೆ ಅನುಗುಣವಾಗಿ ಅಭ್ಯರ್ಥಿಗಳು ಹಾಜರಾಗಬೇಕು. ಮೂಲ ದಾಖಲೆ ತರಬೇಕು, ಸೂಚನೆಗಳನ್ನು ಪಾಲಿಸಬೇಕು ಎಂದು ಕೆಇಎ ಹೇಳಿದೆ.

ಇದೇ ಜ.13ರಂದು ಕೆ–ಸೆಟ್‌ ಪರೀಕ್ಷೆ ನಡೆದಿತ್ತು. ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ 41 ವಿಷಯಗಳಿಗೆ 95,201 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. 6,675 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT