ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ-ಸೆಟ್ ಪರೀಕ್ಷೆ ಜನವರಿ‌ 13ಕ್ಕೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ

Published 13 ಡಿಸೆಂಬರ್ 2023, 6:49 IST
Last Updated 13 ಡಿಸೆಂಬರ್ 2023, 6:49 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಸಲುವಾಗಿ ನಡೆಸುವ ಅರ್ಹತಾ ಪರೀಕ್ಷೆಯನ್ನು ಡಿ.31ರ ಬದಲಿಗೆ ಜನವರಿ‌ 13ರಂದು ನಡೆಸಲಿದೆ.

ಈ ವಿಷಯವನ್ನು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದಲ್ಲದೆ, ಕಲ್ಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳನ್ನು ತಮ್ಮ ಪರೀಕ್ಷಾ ಕೇಂದ್ರಗಳಾಗಿ ಆಯ್ಕೆ‌ ಮಾಡಿಕೊಂಡಿದ್ದ ಅಭ್ಯರ್ಥಿಗಳು ಕ್ರಮವಾಗಿ ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬೇಕಾಗುತ್ತದೆ.

ಧಾರವಾಡ ಜಿಲ್ಲಾ‌ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚುವರಿಯಾಗಿ ಹಾವೇರಿ ಮತ್ತು ಮೈಸೂರು ಜಿಲ್ಲಾ ಕೇಂದ್ರಗಳಿಗೆ ಮಂಡ್ಯ ಪರೀಕ್ಷಾ ಕೇಂದ್ರಗಳನ್ನು ಸೇರಿಸಲಾಗಿದೆ.

ಇವು ಬಿಟ್ಟು ಉಳಿದ ಜಿಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ ಎಂದು ಅವರು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT