ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದೆ.

ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದ ಒಟ್ಟು 41 ವಿಷಯಗಳಿಗೆ ನ. 24ರಂದು ಪರೀಕ್ಷೆ ನಡೆಸಲಾಗಿತ್ತು. ಒಟ್ಟು 6,302 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.

1,06,433 ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದರು. 89,416 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಅರ್ಹತೆ ಪಡೆದ 6,302 ಅಭ್ಯರ್ಥಿಗಳಲ್ಲಿ 3,275 ಪುರುಷರು, 3,020 ಮಹಿಳೆಯರು ಹಾಗೂ 7 ತೃತೀಯ ಲಿಂಗಿಗಳು, 293 ಅಂಗವಿಕಲರು ಇದ್ದಾರೆ. ಅರ್ಹತೆ ಹೊಂದಿದ ಅಭ್ಯರ್ಥಿಗಳ ಸಂಖ್ಯೆ ಶೇ 6ರಷ್ಟಿದೆ ಎಂದು ಅವರು ವಿವರಿಸಿದ್ದಾರೆ.

ಯುಜಿಸಿ ಹಾಗೂ ರಾಜ್ಯದ ಮೀಸಲಾತಿ ನಿಯಮಗಳ ಪ್ರಕಾರ ಅರ್ಹತಾ ಪಟ್ಟಿ ಸಿದ್ಧಪಡಿಸಲಾಗಿದೆ.
ದಾಖಲೆಗಳ ಪರಿಶೀಲನೆ ಬಳಿಕ ಅರ್ಹರಿಗೆ ಪ್ರಮಾಣಪತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.