ಬೆಂಗಳೂರು:ಕನ್ನಡ ಸಾಹಿತ್ಯ ಪರಿಷತ್ತು ನೀಡುವ ‘ಚಾವುಂಡರಾಯ ದತ್ತಿ ಪ್ರಶಸ್ತಿ’ಗೆನಿವೃತ್ತ ಕನ್ನಡ ಪ್ರಾಧ್ಯಾಪಕ ಹಾಗೂ ಲೇಖಕ ಪ್ರೊ.ಶಾಂತಿನಾಥ ದಿಬ್ಬದ ಅವರು ಆಯ್ಕೆಯಾಗಿದ್ದಾರೆ.

ಪರಿಷತ್ತಿನ ಅಧ್ಯಕ್ಷಮಹೇಶ ಜೋಶಿ ನೇತೃತ್ವದಲ್ಲಿ ಈ ಆಯ್ಕೆ ನಡೆದಿದೆ. ಪ್ರಶಸ್ತಿಯು ₹ 30 ಸಾವಿರ ನಗದು ಒಳಗೊಂಡಿದೆ.

ಗುಲಬರ್ಗಾ ವಿಶ್ವವಿದ್ಯಾಲಯ, ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸಿದ ಅವರು, 32 ವರ್ಷಗಳು ಕನ್ನಡದ ಪ‍್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

‘ವಾಗ್ದೇವಿಯ ಭಂಡಾರದ ಮುದ್ರೆ’, ‘ಜೀವಪರ ಜನಪರ’, ‘ಆಗಮಿಕ ಮಹಾಕವಿ ಪಂಪ ಮತ್ತು ಅವನ ಕೃತಿಗಳು’, ‘ಜೈನ ಸಂಸ್ಕೃತಿ ಸಮೀಕ್ಷೆ, ‘ಜೈನ ಪುರಾಣಗಳ ಸಂದೇಶ’ ಸೇರಿದಂತೆವಿವಿಧ ಕೃತಿಗಳನ್ನು ಅವರು ಪ್ರಕಟಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.