ಕಡರನಾಯ್ಕನಹಳ್ಳಿ: ಸಮೀಪದ ನಂದಿಗಾವಿ ಬಳಿ ತುಂಗಭದ್ರಾ ನದಿಯಿಂದ ನೀರನ್ನು ಶುದ್ಧೀಕರಿಸಿ ಗುರುವಾರ 21 ಗ್ರಾಮಗಳಿಗೆ ನೀರು ಸರಬರಾಜು ಮಾಡಲಾಗಿದೆ.

21 ಗ್ರಾಮಗಳಲ್ಲಿ 15 ದಿನಗಳಿಂದ ನೀರಿಲ್ಲದೆ ಜನ ಮತ್ತು ಜಾನುವಾರುಗಳಿಗೆ ತೊಂದರೆ ಉಂಟಾಗಿತ್ತು. ಈ ಕುರಿತು ಬುಧವಾರ ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾಗುತ್ತಿದ್ದಂತೆ ಅಧಿಕಾರಿಗಳು ಎಚ್ಚೆತ್ತಿದ್ದಾರೆ.

ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸಂಜೀವಕುಮಾರ ಶಳಕೆ ಅವರು ‘ಬೆಳೆಗಿನ ನಡೆ ಗ್ರಾಮದ ಕಡೆ’ ಕಾರ್ಯಕ್ರಮದಡಿ ಭಾನುವಳ್ಳಿ ಮತ್ತು ನಂದಿಗಾವಿ ಬಳಿಯ ಬಹುಗ್ರಾಮ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ನೀರು ಶುದ್ಧೀಕರಣ ಘಟಕದ ಸ್ಥಿತಿಯನ್ನು ಪರಿಶೀಲಿಸಿದ ಅವರು, ತಕ್ಷಣವೇ ಸಮಸ್ಯೆ ಬಗೆಹರಿಸಿ ನೀರಿನ ತೊಂದರೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕಿರಿಯ ಎಂಜಿನಿಯರ್ ಕೆ.ಎ ಜಾಕೀರ್, ಪಿಡಿಒ ಕಾಳಮ್ಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-43-1643937161

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.