ಮಂಗಳೂರು: ಶುಕ್ರವಾರ ನಿಧನರಾಗಿದ್ದ ಅಂತರರಾಷ್ಟ್ರೀಯ ಖ್ಯಾತಿಯ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಅವರ ಅಂತ್ಯಕ್ರಿಯೆ ಹುಟ್ಟೂರು ಬಂಟ್ವಾಳ ತಾಲ್ಲೂಕಿನ ಸಜಿಪಮೂಡ ಮಿತ್ತಕೆರೆಯಲ್ಲಿ ಸೋಮವಾರ ಸಂಜೆ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಮಧ್ಯಾಹ್ನ 3 ಗಂಟೆಗೆ ಗೋಪಾಲನಾಥ್ ಅವರ ಪಾರ್ಥಿವ ಶರೀರ ಮಿತ್ತಕೆರೆ ತಲುಪಿತು. ಬಳಿಕ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಸರ್ಕಾರಿ ಗೌರವ ಸಲ್ಲಿಸಲಾಯಿತು. ಡಿವೈಎಸ್‌ಪಿ ದಿನಕರ ಶೆಟ್ಟಿ ನೇತೃತ್ವದಲ್ಲಿ ಸಶಸ್ತ್ರ ಮೀಸಲು ಪಡೆಯ ಪೊಲೀಸರು ಗೌರವಾರ್ಥ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದರು.

ಕಲಾವಿದರಾದ ನರಸಿಂಹಲು ವಡವಾಟಿ, ರಾಜೇಂದ್ರ ನಾಕೋಡ್, ಕೆ.ಸೇಖರ್ ಸೇರಿದಂತೆ ನೂರಾರು ಮಂದಿ ಗೌರವ ಸಲ್ಲಿಸಿದರು. ಸಂಸದ ನಳಿನ್‌ಕುಮಾರ್ ಕಟೀಲ್, ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ. ರಮಾನಾಥ ರೈ ನಮನ ಸಲ್ಲಿಸಿದರು.

ಜೋಗಿ ಸಮುದಾಯದ ಸಂಪ್ರದಾಯದಂತೆ ಗೋಪಾಲನಾಥ್ ಅವರ ಮಕ್ಕಳಾದ ಗುರುಪ್ರಸಾದ್, ಮಣಿಕಾಂತ್ ಕದ್ರಿ ಅಂತಿಮ ವಿಧಿ ವಿಧಾನ ನೆರವೇರಿಸಿದರು. ನಂತರ ಅವರ ಕುಟುಂಬದ ಜಮೀನಿನಲ್ಲಿ ಪಾರ್ಥಿವ ಶರೀರವನ್ನು ಸಮಾಧಿ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.